ETV Bharat / state

ಧಾರವಾಡ, ಬಳ್ಳಾರಿ, ಬೆಳಗಾವಿಯಲ್ಲಿ 72ನೇ ಗಣರಾಜ್ಯೋತ್ಸವದ ಸಂಭ್ರಮ

author img

By

Published : Jan 26, 2021, 10:13 AM IST

ಬಳ್ಳಾರಿಯಲ್ಲೂ 72ನೇ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ನಗರದ ಹೃದಯ ಭಾಗದಲ್ಲಿರುವ ಹೆಚ್.ಆರ್.ಗವಿಯಪ್ಪ ವೃತ್ತದಲ್ಲಿರುವ ಉದ್ಯಾನದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

72nd Republic Day Celebration in Dharawad, Belagavi, Bellary
ಬೆಳಗಾವಿಯಲ್ಲಿ 72ನೇ ಗಣರಾಜ್ಯೋತ್ಸವದ ಸಂಭ್ರಮ

ಧಾರವಾಡ/ ಬಳ್ಳಾರಿ/ ಬೆಳಗಾವಿ: 72ನೇ ಗಣರಾಜ್ಯೋತ್ಸವದ ನಿಮಿತ್ತ ಧಾರವಾಡ ಆರ್.ಎನ್.ಶೆಟ್ಟಿ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೇರವೇರಿಸಿ ವಿವಿಧ ಪೊಲೀಸ್ ದಳಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಧಾರವಾಡ, ಬಳ್ಳಾರಿ, ಬೆಳಗಾವಿಯಲ್ಲಿ 72ನೇ ಗಣರಾಜ್ಯೋತ್ಸವದ ಸಂಭ್ರಮ

ಬಳಿಕ ಮಾತನಾಡಿದ ಅವರು, ಕಳೆದ 2020ರ ಪ್ರಾರಂಭದ ದಿನಗಳಲ್ಲಿ ಕಾಣಿಸಿಕೊಂಡ ಕೋವಿಡ್ ವೈರಾಣು ತಡೆಯುವಲ್ಲಿ ಭಾರತ ದೇಶ ಮತ್ತು ಕರ್ನಾಟಕ ರಾಜ್ಯ ಯಶಸ್ವಿ ಕ್ರಮಗಳನ್ನು ಕೈಗೊಂಡಿದೆ. ಕೋವಿಡ್ ನಿಯಂತ್ರಣಕ್ಕೆ ಜಾರಿಗೊಳಿಸಿದ ಲಾಕ್‍ಡೌನ್‍ನಿಂದಾಗಿ ಎಲ್ಲ ರಂಗಗಳ ಮೇಲೆ ಉಂಟಾದ ಪರಿಣಾಮಗಳನ್ನು ಎದುರಿಸಲು ಸರ್ಕಾರ ದಿಟ್ಟ ಪ್ರಯತ್ನ ಮಾಡುತ್ತಿದೆ ಎಂದರು.

ಬಳ್ಳಾರಿಯಲ್ಲಿ ಗಣತಂತ್ರ ದಿನದ ಸಂಭ್ರಮ

ಬಳ್ಳಾರಿಯಲ್ಲೂ 72ನೇ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ನಗರದ ಹೃದಯ ಭಾಗದಲ್ಲಿರುವ ಹೆಚ್.ಆರ್.ಗವಿಯಪ್ಪ ವೃತ್ತದಲ್ಲಿರುವ ಉದ್ಯಾನದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಧ್ವಜಾರೋಹಣ ನೆರವೇರಿಸಿದರು.

ಬೆಳಗಾವಿಯಲ್ಲಿ ಗಣರಾಜ್ಯೋತ್ಸವ

ಬೆಳಗಾವಿಯಲ್ಲೂ 72ನೇ ಗಣರಾಜ್ಯೋತ್ಸವ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ‌ ಧ್ವಜಾರೋಹಣ ನೆರೇವರಿಸಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಿಸಿದ ಸಚಿವ ಜಾರಕಿಹೊಳಿ‌ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ಸಚಿವ ರಮೇಶ ಜಾರಕಿಹೊಳಿ ಅವರು ತೆರೆದ ವಾಹನದಲ್ಲಿ ಪಥಸಂಚಲನ ಪರಿವೀಕ್ಷಣೆ ಮಾಡಿದರು. ಬಳಿಕ ವಿವಿಧ ತುಕಡಿಗಳಿಂದ ಸಚಿವ ರಮೇಶ ಗೌರವ ವಂದನೆ ಸ್ವೀಕರಿಸಿದರು.

ಓದಿ : ರಾಜಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್

15 ಸಾವಿರ ವೈದ್ಯಕೀಯ ಸಿಬ್ಬಂದಿಗೆ ಲಸಿಕೆ:

ಧ್ವಜಾರೋಹಣ ಬಳಿಕ ಭಾಷಣ ಮಾಡಿದ ಸಚಿವ ರಮೇಶ್ ಜಾರಕಿಹೊಳಿ‌, ಕೊರೊನಾ ನಿಯಂತ್ರಣದಲ್ಲಿ ವೈದ್ಯಕೀಯ ಸಿಬ್ಬಂದಿ ಮಹತ್ವದ ಪಾತ್ರ ನಿರ್ವಹಿಸುತ್ತಿದ್ದಾರೆ. 22 ಸಾವಿರ ವೈದ್ಯಕೀಯ ಸಿಬ್ಬಂದಿ ಪೈಕಿ 15 ಸಾವಿರ ಸಿಬ್ಬಂದಿ ವ್ಯಾಕ್ಸಿನ್ ಪಡೆದಿದ್ದಾರೆ. ಉಳಿದವರಿಗೆ ಕೂಡ ವ್ಯಾಕ್ಸಿನ್ ಹಂಚಿಕೆ ಮಾಡಲಾಗುತ್ತಿದೆ. ಎಲ್ಲರಿಗೂ ವ್ಯಾಕ್ಸಿನ್ ಸಿಗಬೇಕು ಎಂಬುವುದು ನಮ್ಮ ಸರ್ಕಾರದ ಬಯಕೆಯಾಗಿದೆ. ಅಧಿಕಾರಿಗಳು ತ್ವರಿತವಾಗಿ ವ್ಯಾಕ್ಸಿನ್ ವಿತರಿಸಬೇಕು ಎಂದು ಕೋರಿದರು. ಉಳಿದಂತೆ ಸರ್ಕಾರದ ಯೋಜನೆಗಳ ಜಾರಿ ಅನುದಾನ ಬಿಡುಗಡೆ ಹಾಗೂ ಕಾಮಗಾರಿ ಕುರಿತು ಭಾಷಣದಲ್ಲಿ ಪ್ರಸ್ತಾಪಿಸಿದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.