ETV Bharat / state

ಧಾರವಾಡ: ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯಗೊಳಿಸಿದ ಬ್ಯಾಂಕಿಗೆ 85 ಸಾವಿರ ರೂ. ದಂಡ - ಗ್ರಾಹಕ ನ್ಯಾಯಾಲಯದಿಂದ ಬ್ಯಾಂಕ್ ಗೆ ದಂಡ

ವ್ಯಕ್ತಿಯೊಬ್ಬರು ಬ್ಯಾಂಕಿನಿಂದ ಹಣ ಪಡೆಯಲು ಕನ್ನಡದಲ್ಲಿ ಬರೆದ ಚೆಕ್ ನ್ನು ನೀಡಿದ್ದು, ಇದನ್ನು ಅಮಾನ್ಯಗೊಳಿಸಿದ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 85,177 ರೂ.ದಂಡ ಪರಿಹಾರ ಪಾವತಿಸುವಂತೆ ಆದೇಶಿಸಿದೆ.

85000-fine-to-the-bank-for-rejecting-cheque-written-in-kannada
ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯಗೊಳಿಸಿದ ಬ್ಯಾಂಕಿಗೆ 85 ಸಾವಿರ ರೂ. ದಂಡ
author img

By

Published : Sep 7, 2022, 5:43 PM IST

Updated : Sep 7, 2022, 6:55 PM IST

ಧಾರವಾಡ : ಕನ್ನಡದಲ್ಲಿ ಬರೆದ ಕಾಸೋಲೆ(ಚೆಕ್)ಯನ್ನು ಅಮಾನ್ಯ ಮಾಡಿದ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 85,177 ರೂ.ದಂಡ ಪರಿಹಾರ ಪಾವತಿಸುವಂತೆ ಆದೇಶ ಹೊರಡಿಸಿದೆ.

ಇಲ್ಲಿನ ಇಂಗ್ಲಿಷ್ ಪ್ರಾಧ್ಯಾಪಕ ವಾದಿರಾಜಾಚಾರ್ಯ ಇನಾಮದಾರ ಎಂಬುವರು ತಮ್ಮ ಉಳಿತಾಯ ಖಾತೆಯಲ್ಲಿದ್ದ ಹಣ ಹಿಂಪಡೆಯಲು ಕನ್ನಡದಲ್ಲಿ ಬರೆದ ಚೆಕ್ ಅನ್ನು ಬ್ಯಾಂಕ್ ಗೆ ಸಲ್ಲಿಸಿದ್ದರು. ಈ ಚೆಕ್ ನ್ನು ಹಳಿಯಾಳದ ಎಸ್‌ಬಿಐ ಶಾಖೆ ತಿರಸ್ಕರಿಸಿತ್ತು. ಈ ಬಗ್ಗೆ ವಾದಿರಾಜಾಚಾರ್ಯ ಅವರು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರು ದಾಖಲಿಸಿದ್ದರು.

ಅಮಾನ್ಯಗೊಳಿಸಿದ ಬ್ಯಾಂಕಿಗೆ 85 ಸಾವಿರ ರೂ ದಂಡ : ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಆಯೋಗವು ದೂರುದಾರರ ಉಳಿತಾಯ ಖಾತೆಯಲ್ಲಿ 9 ಲಕ್ಷ ರೂ.ಕ್ಕಿಂತ ಹೆಚ್ಚು ಹಣ ಇದ್ದರೂ, ಕೇವಲ 6 ಸಾವಿರ ರೂ. ಮೌಲ್ಯದ ಚೆಕ್​ಅನ್ನು ನಿರಾಕರಿಸಿದೆ. ಜೊತೆಗೆ ಕನ್ನಡ ಭಾಷೆಯಲ್ಲಿ ಬರೆದುದಕ್ಕಾಗಿ ಅಮಾನ್ಯ ಮಾಡಿರುವುದನ್ನು ಸೇವಾ ನ್ಯೂನ್ಯತೆ ಎಂದು ಪರಿಗಣಿಸಿದೆ. ಇದಕ್ಕಾಗಿ ಹಳಿಯಾಳ ಎಸ್‌ಬಿಐ ಬ್ಯಾಂಕ್ ಶಾಖೆಯು ದೂರುದಾರರಿಗೆ ಪರಿಹಾರ ಮತ್ತು ದಂಡ ರೂಪದಲ್ಲಿ ಒಟ್ಟು 85,177 ರೂ ಗಳನ್ನು ಪಾವತಿಸುವಂತೆ ಆದೇಶಿಸಿದೆ.

ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ಸದಸ್ಯರಾದ ವಿ.ಅ. ಬೋಳಶೆಟ್ಟಿ ಮತ್ತು ಪಿ.ಸಿ. ಹಿರೇಮಠ ಈ ತೀರ್ಪು ನೀಡಿದ್ದಾರೆ. ಬ್ಯಾಂಕುಗಳಲ್ಲಿ ತ್ರಿಭಾಷಾ ಸೂತ್ರದ ಬಳಕೆ ನಿಯಮಾನುಸಾರ, ಸ್ಥಳೀಯ ಭಾಷಾ ಬಳಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಧಾರವಾಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ನೀಡಿರುವ ಆದೇಶ ವಿಶೇಷ ಹಾಗೂ ಮಹತ್ವದ್ದೆನಿಸಿದೆ.

ಇದನ್ನೂ ಓದಿ : ಚಲಿಸುತ್ತಿದ್ದ ಬಸ್ಸಿನಲ್ಲೇ ಹೆಡೆ ಎತ್ತಿದ ನಾಗಪ್ಪ.. ಚಾಲಕ ಸ್ವಲ್ಪದರಲ್ಲೇ ಬಚಾವ್​!

Last Updated : Sep 7, 2022, 6:55 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.