ಧಾರವಾಡ: ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿರುವ ಘಟನೆ ಇಲ್ಲಿನ ನವಲೂರು ಗ್ರಾಮದ ಬಳಿ ನಡೆದಿದೆ.
ಹುಬ್ಬಳಿಯಿಂದ ಧಾರವಾಡ ಕಡೆ ಬರುತ್ತಿದ್ದ ವೇಳೆ ಲಾರಿ ಚಕ್ರಕ್ಕೆ ಬೈಕ್ ಸಿಲುಕಿಕೊಂಡ ಪರಿಣಾಮ, ಓರ್ವ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದು, ಇನ್ನೊಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.