ಹುಬ್ಬಳ್ಳಿ : ಕೋವಿಡ್ನಿಂದ ಗುಣಮುಖರಾದ ಒಬ್ಬರನ್ನು ಇಂದು ಹುಬ್ಬಳ್ಳಿಯ ಕಿಮ್ಸ್ ನಿಂದ ಬಿಡುಗಡೆ ಮಾಡಲಾಗಿದೆ.
ನೆಗಡಿ, ಕೆಮ್ಮು ಹಾಗೂ ತೀವ್ರ ಜ್ವರದಿಂದ ಬಳಲುತ್ತಿದ್ದ ಇವರಲ್ಲಿ ಮೇ 7 ರಂದು ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಧಾರವಾಡ ಹೊಸಯಲ್ಲಾಪುರದ ಕೋಳಿಕೆರೆ, ನವಲೂರ ಅಗಸಿ ಪ್ರದೇಶದ ಪಿ- 705 ( 35 ವರ್ಷ,ಪುರುಷ) ಸಂಪೂರ್ಣ ಗುಣಮುಖರಾಗಿದ್ದಾರೆ.
24 ಗಂಟೆಗಳ ಅಂತರದಲ್ಲಿ ಎರಡು ಬಾರಿ ಅವರ ಗಂಟಲು ದ್ರವ ಪರೀಕ್ಷೆ ಮಾಡಿದಾಗ ನೆಗೆಟಿವ್ ವರದಿ ಬಂದಿದೆ. ಎಕ್ಸ್ ರೇ ಮೂಲಕ ಪರೀಕ್ಷೆ ಮಾಡಿ ಶ್ವಾಸಕೋಶದ ತೊಂದರೆ ಇಲ್ಲ ಎಂಬುದನ್ನು ವೈದ್ಯರು ದೃಢಪಡಿಸಿದ್ದಾರೆ. ಇವರನ್ನು ಕಿಮ್ಸ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 11 ಜನ ಕೋವಿಡ್-19 ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.