ಧಾರವಾಡ: ಕೆರೆಯಲ್ಲಿ ಈಜಲು ಹೋಗಿ ವ್ಯಕ್ತಿ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಸಲಕಿನಕೊಪ್ಪ ಗ್ರಾಮದ ನಿವಾಸಿ ಶ್ರೀಕಾಂತ ಬಾವಿ (56) ಮೃತಪಟ್ಟವರು. ನಿನ್ನೆ ಮಧ್ಯಾಹ್ನ ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ನೀರಲ್ಲಿ ಮುಳುಗಿ ಸಾವನಪ್ಪಿದ್ದಾರೆ. ನಿನ್ನೆಯಿಂದ ಶವ ಹೊರತೆಗೆಯಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟಿದ್ದರು. ಇಂದು ಬೆಣಚಿ ಗ್ರಾಮದ ಈಜುಗಾರ ಸಾಗರ ಪಾಟೀಲ್ ಹಾಗೂ ಅವರ ತಂಡದವರು ಕಾರ್ಯಾಚರಣೆ ನಡೆಸಿ ಮೃತ ದೇಹ ಹೊರತೆಗೆದರು.
ಧಾರವಾಡ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.