ಧಾರವಾಡ: ಮನೆಯ ಹಿತ್ತಲಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆ ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಧಾರವಾಡದ ಹಿರೇಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ.
ಹಿರೇಮಲ್ಲಿಗವಾಡ ಗ್ರಾಮದ ರಾಮನಗೌಡ ಪಾಟೀಲ ಎಂಬಾತ ಯಾರಿಗೂ ಗೊತ್ತಾಗದಂತೆ ತನ್ನ ಮನೆಯ ಹಿತ್ತಲಿನಲ್ಲಿ ಗಾಂಜಾ ಬೆಳೆ ಬೆಳೆದಿದ್ದ. ಈ ವಿಷಯ ತಿಳಿದ ಧಾರವಾಡ ಗ್ರಾಮೀಣ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಸುಮಾ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನಿಂದ 2 ಕೆಜಿ 650 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.