ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಅಪರಿಚಿತ ವ್ಯಕ್ತಿಯ ಮೇಲೆ ಗೌಳಿಗಲ್ಲಿಯ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಎಮ್ಮೆ ಹೊಡೆದುಕೊಂಡು ಹೋಗುತ್ತಿದ್ದ ಗೌಳಿವ್ಯಕ್ತಿ ಮತ್ತು ವ್ಯಕ್ತಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಈ ಜಗಳ ವಿಕೋಪಕ್ಕೆ ತಿರುಗಿ ಗೌಳಿವ್ಯಕ್ತಿ ಪರಿಚಿತ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಆಗ ಸ್ಥಳೀಯರು ಮಧ್ಯ ಪ್ರವೇಶಿಸಿ ಇಬ್ಬರ ಜಗಳ ಬಿಡಿಸಿದರು.