ಧಾರವಾಡ: ಆಸ್ತಿ ವಿಚಾರವಾಗಿ ವ್ಯಕ್ತಿಯನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ.
ಅಮ್ಮಿನಬಾವಿ ಗ್ರಾಮದ ಶಿವಪ್ಪ ಕೊಡಬಳಗಿ (38) ಕೊಲೆಯಾದ ವ್ಯಕ್ತಿ. ಜಮೀನಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿತ್ತು. ಗಲಾಟೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.