ಹುಬ್ಬಳ್ಳಿ: ದೇವರ ಮೂರ್ತಿಯನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕಲಘಟಗಿ ತಾಲೂಕಿನ ಅರಳಿಹೊಂಡ ಗ್ರಾಮದಲ್ಲಿ ನಡೆದಿದೆ.
ಗ್ರಾಮದೇವತೆ ದೇವಸ್ಥಾನದಲ್ಲಿ ದೇವರ ಹಿತ್ತಾಳೆ ಮೂರ್ತಿಯನ್ನು ಕದ್ದೊಯ್ಯುತ್ತಿರುವಾಗ ಕಳ್ಳನು ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈತ ಮಹಾರಾಷ್ಟ್ರದಿಂದ ಕಬ್ಬು ಕಡಿಯುವ ತಂಡದೊಂದಿಗೆ ಬಂದಿದ್ದಾನೆ ಎಂದು ಹೇಳಲಾಗ್ತಿದೆ.
ಓದಿ:ಹೊರಟ್ಟಿಗೆ ಮತ್ತೊಮ್ಮೆ ಒಲಿದು ಬಂದ ಸಭಾಪತಿ ಸ್ಥಾನ
ಇವನನ್ನು ಈಗ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕಿ ತನಿಖೆ ನಡೆಸುತ್ತಿದ್ದಾರೆ.