ಧಾರವಾಡ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆ ಕೊಲೆ ಮಾಡಿರುವ ಘಟನೆ ಧಾರವಾಡದ ಜಿಲ್ಲಾಸ್ಪತ್ರೆ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಜಿಲ್ಲಾಸ್ಪತ್ರೆ ಬಳಿಯ ಸ್ಪರ್ಶ ಆಸ್ಪತ್ರೆ ಹತ್ತಿರ ಮಹಿಳೆಯ ಶವ ಪತ್ತೆಯಾಗಿದೆ. ಸ್ಥಳಕ್ಕೆ ಧಾರವಾಡ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಹಿಳೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಉಪನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
(ಓದಿ: ಮಾಲೀಕನ ಕೊಲೆ ಕೇಸ್: ಹತ್ಯೆ ಮಾಡಿ 10 ಕೆಜಿ ಚಿನ್ನ, 55 ಲಕ್ಷ ರೂ. ಹಣ ದೋಚಿದ್ದ ಕೆಲಸಗಾರನ ಕರಾಮತ್ತು ಬಯಲಿಗೆ)