ಧಾರವಾಡ: ಹೆರಿಗೆಗಾಗಿ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಗರ್ಭಿಣಿಯೋರ್ವಳು ಆಂಬ್ಯುಲೆನ್ಸ್ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಧಾರವಾಡದಲ್ಲಿ ನಡೆದಿದೆ.
ತಾಲೂಕಿನ ಮುರಕಟ್ಟಿಯಿಂದ ಧಾರವಾಡ ಜಿಲ್ಲಾಸ್ಪತ್ರೆಗೆ ಬರುವಾಗ ಆಂಬ್ಯುಲೆನ್ಸ್ನಲ್ಲಿ ತೀವ್ರ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ ಆಂಬ್ಯುಲೆನ್ಸ್ನಲ್ಲೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ನೇತ್ರಾವತಿ ನಾಗರಾಜ್ ಶಿರನಲಕರ(23) ಎಂಬ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ. ಆಂಬ್ಯುಲೆನ್ಸ್ ಸಿಬ್ಬಂದಿ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ಆಂಬ್ಯುಲೆನ್ಸ್ ಸಿಬ್ಬಂದಿ ಮಂಜುನಾಥ್ ಮುಂದಿನಮನಿ ಪೈಲೆಟ್ ಹಾಗೂ ವಾಹನ ಚಾಲಕ ದೇವೇಂದ್ರ ಎಸ್. ಗಂಗಾಧರ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ತಾಯಿ-ಮಗು ಆರೋಗ್ಯವಾಗಿದ್ದಾರೆ.