ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯ ಮುಂಭಾಗದ ಹುಬ್ಬಳ್ಳಿ-ಧಾರವಾಡ ರಸ್ತೆಯಲ್ಲಿ ಡೀಸೆಲ್ ಟ್ಯಾಂಕರ್ ವಾಹನಕ್ಕೆ ಬೈಕ್ವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಮಹಿಳೆ ಸಾವನ್ನಪ್ಪಿ, ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಟ್ಯಾಂಕರ್ ಲಾರಿ ಹಾಗೂ ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ಹೊರಟಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ಮಹಿಳೆ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.
ಘಟನಾ ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.