ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಜಗಳವಾಗಿ ಓರ್ವನಿಗೆ ಚಾಕು ಇರಿದ ಘಟನೆ ಹಳೇ ಹುಬ್ಬಳ್ಳಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ಸಂದೀಪ್ ಹಾಗೂ ಇನ್ನಿಬ್ಬರ ನಡುವೆ ಪ್ರಾರಂಭವಾದ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಈ ವೇಳೆ ಕೋಪಗೊಂಡ ಇಬ್ಬರು ಯುವಕರು, ಸಂದೀಪ್ ಕೈ ಹಾಗೂ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಮಾವನ ಮನೆಗೆ ಬಂದಿದ್ದ ಅಳಿಯನಿಂದ ಮಗಳ ಮೇಲೆ ಹಲ್ಲೆ: ಪತ್ನಿ, ಕಂದಮ್ಮನಿಗೆ ಚಾಕು ಇರಿತ
ಕೂಡಲೇ ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.