ETV Bharat / state

ಸೆಲ್ಫಿ ಗೀಳು.. ನೀರಿನ ರಭಸಕ್ಕೆ ಕೊಚ್ಚಿಹೋದ ಕಲಘಟಗಿಯ ಯುವಕ

author img

By

Published : Jul 17, 2022, 9:31 PM IST

ಸೆಲ್ಫಿ ಗೀಳಿಗೆ ಶನಿವಾರ ತುಮಕೂರಲ್ಲಿ ಆಟೋ ಚಾಲಕನೋರ್ವ ನೀರಲ್ಲಿ ಕೊಚ್ಚಿ ಹೋಗಿದ್ದ. ಇಂದು ನೀರಸಾಗರ ಡ್ಯಾಂ ದಡದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವೇಳೆ ಯುವಕನೋರ್ವ ಕೊಚ್ಚಿಕೊಂಡು ಹೋಗಿದ್ದಾರೆ.

ಕಿರಣ ರಜಪೂತ
ಕಿರಣ ರಜಪೂತ

ಹುಬ್ಬಳ್ಳಿ: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕನೋರ್ವ ನೀರುಪಾಲಾದ ಘಟನೆ ಕಲಘಟಗಿ ತಾಲೂಕಿನ ನೀರಸಾಗರದ ಜಲಾಶಯದಲ್ಲಿ ನಡೆದಿದೆ. ಕಿರಣ ರಜಪೂತ(22) ನೀರಲ್ಲಿ ಕೊಚ್ಚಿ ಹೋಗಿರುವ ಯುವಕ.

ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ‌ ಕಿರಣ ಇಂದು ಗೆಳೆಯರೊಡನೆ ಪ್ರವಾಸಕ್ಕೆಂದು ಹೋಗಿದ್ದರು. ಈ ಸಮಯದಲ್ಲಿ ಸೆಲ್ಫಿಗಾಗಿ ನೀರಸಾಗರ ಜಲಾಶಯದ ದಡದಲ್ಲಿ ನಿಂತಿದ್ದರು. ಈ ವೇಳೆ ನೀರಿನ ರಭಸ ಹೆಚ್ಚಾಗಿದ್ದರಿಂದ ಕಿರಣ ಕೊಚ್ಚಿ ಹೋಗಿದ್ದಾರೆ. ಯುವಕನಿಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿದ್ದಾರೆ. ಈ ಕುರಿತು ಕಲಘಟಗಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಇದನ್ನೂ ಓದಿ: ತುಮಕೂರಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕೊಚ್ಚಿ ಹೋದ ಆಟೋ ಚಾಲಕ!)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.