ಹುಬ್ಬಳ್ಳಿ : ಡ್ರಗ್ಸ್ ಮಾಫಿಯಾವನ್ನು ಬೇರು ಸಮೇತ ಕಿತ್ತೆಸೆದು ಸಮಾಜ ಹಾಗೂ ಸಾರ್ವಜನಿಕ ಹಿತ ಕಾಪಾಡಬೇಕು ಎಂದು ಆಗ್ರಹಿಸಿ ಎಬಿವಿಪಿ ವತಿಯಿಂದ ಪತ್ರ ಚಳವಳಿ ಮಾಡುವ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಯಿತು.
ಮಾದಕ ವಸ್ತುಗಳ ಬಳಕೆ ಎಲ್ಲಾ ಕ್ಷೇತ್ರಕ್ಕೂ ವ್ಯಾಪಿಸಿದೆ. ಹೆಚ್ಚಿನದಾಗಿ ವಿದ್ಯಾರ್ಥಿಗಳು ಇದಕ್ಕೆ ಬಲಿಯಾಗುತ್ತಿದ್ದಾರೆ. ಈ ಕೂಡಲೇ ಸೂಕ್ತ ತನಿಖೆ ಕೈಗೊಂಡು ಡ್ರಗ್ಸ್ ಮಾಫಿಯಾವನ್ನು ಬೇರು ಸಮೇತ ನಿರ್ನಾಮ ಮಾಡಬೇಕು ಎಂದು ಒತ್ತಾಯಿಸಿದರು.