ಧಾರವಾಡ: ಧಾರವಾಡ ಕರ್ನಾಟಕ ವಿಶ್ವ ವಿದ್ಯಾಲಯದ ಮಾಜಿ ಕುಲಸಚಿವ ಕಲ್ಲಪ್ಪ ಹೊಸಮನಿ ಮನೆ ಮೇಲೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಶ್ರೀನಗರದಲ್ಲಿರುವ ಅವರ ಮನೆ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ದಾಖಲೆಗಳ ಹುಡುಕಾಟದಲ್ಲಿ ತೊಡಗಿದ್ದಾರೆ. ಅವರ ಮೇಲೆ ವಿವಿಧ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಹೊಸಮನಿ ಅವರನ್ನು ಕಳೆದ 6 ತಿಂಗಳ ಹಿಂದೆ ಕುಲಸಚಿವ ಸ್ಥಾನದಿಂದ ಸರ್ಕಾರ ಕೆಳಗಿಳಿಸಿತ್ತು.