ಹುಬ್ಬಳ್ಳಿ: ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರಿಗೆ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪದಡಿ ಹುಬ್ಬಳ್ಳಿ ಜಿಲ್ಲಾ ಖಜಾನೆ ಇಲಾಖೆಯ ಎಫ್‌ಡಿಎ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಹುಬ್ಬಳ್ಳಿಯ ತಹಶೀಲ್ದಾರ್ ಕಚೇರಿಯ ಜಿಲ್ಲಾ ಖಜಾನೆ ಇಲಾಖೆಯಲ್ಲಿ ಎಫ್‌ಡಿಎ ಆಗಿ ಅಭಿಲಾಷ ಆಲೂರ ಕಾರ್ಯ ನಿರ್ವಹಿಸುತ್ತಿದ್ದರು. ಇವರು ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗೆ 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮುಂಗಡ ಹಣವಾಗಿ ಮೂರು ಸಾವಿರ ರೂಪಾಯಿಯನ್ನು ಪಡೆದುಕೊಳ್ಳುವ ಸಮಯದಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಧಾರವಾಡ ಜಿಲ್ಲಾ ಎಸಿಬಿ ಡಿವೈಎಸ್ಪಿ ವೇಣುಗೋಪಾಲ ನೇತೃತ್ವದಲ್ಲಿ ದಾಳಿ ನಡೆದಿದೆ. ನಗರ ಜಿಲ್ಲಾ ಖಜಾನೆ ಕಚೇರಿಯಲ್ಲಿ ವಿಚಾರಣೆ ನಡೆಯುತ್ತಿದೆ.