ಧಾರವಾಡ: ಬಿಆರ್ಟಿಎಸ್-ಚಿಗರಿ ಬಸ್ಗಳೆರಡು ಮುಖಾಮುಖಿ ಡಿಕ್ಕಿಯಾದ ಘಟನೆ ನಗರದ ಯಾಲಕ್ಕಿ ಶೆಟ್ಟರ ಕಾಲೋನಿ ಬಳಿ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಸಾವುನೋವಾಗಿಲ್ಲ.
ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಬಸ್ ಚಿಗರಿ ಬಸ್ಅನ್ನು ಓವರ್ಟೇಕ್ ಮಾಡುವ ಭರದಲ್ಲಿ ಡಿಕ್ಕಿ ಹೊಡೆದಿದ್ದು, ಪಕ್ಕದಲ್ಲಿದ್ದ ಬ್ಯಾರಿಕೇಟರ್ಗೂ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಘಟನೆಯಿಂದಾಗಿ ಬಿಆರ್ಟಿಎಸ್ ರಸ್ತೆಯಲ್ಲಿ ಕೆಲ ಸಮಯಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.