ಹುಬ್ಬಳ್ಳಿ: ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-4 ಧಾರಾವತಿ ಹನುಮಂತ ದೇವಸ್ಥಾನದ ಬಳಿ ನಡೆದಿದೆ.
ಮಂಜುನಾಥ ಫೀರಣ್ಣವರ (41) ಮೃತ ದುರ್ದೈವಿ. ಈತ ಧಾರವಾಡದಿಂದ ನಗರಕ್ಕೆ ಬೈಕ್ನಲ್ಲಿ ಬರುತ್ತಿದ್ದಾಗ ಎದುರುಗಡೆಯಿಂದ ಬಂದ ಲಾರಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.
ಘಟನೆ ಸಂಬಂಧ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರಿಕ್ಷೆಗೆ ಕಳುಹಿಸಲಾಗಿದೆ.