ಧಾರವಾಡ: ಬೈಕ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟು ಓರ್ವನಿಗೆ ಗಂಭೀರ ಗಾಯವಾದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ಘಟನೆ ಸಂಭವಿಸಿದೆ. ಶಿವಪ್ಪ ಕಾಳೆ (25) ದುರ್ಗಪ್ಪ (30) ಮೃತ ದುರ್ದೈವಿಗಳಾಗಿದ್ದು, ಓರ್ವನಿಗೆ ಗಂಭೀರ ಗಾಯಗಳಾಗಿವೆ.
ಟೆಂಪೋ, ಕಾರ್ ನಡುವೆ ಮುಖಾಮುಖಿ ಡಿಕ್ಕಿ: ಮಗು ಸೇರಿ ನಾಲ್ವರು ಸಾವು!
ಗಾಯಾಳನ್ನು ಹುಬ್ಬಳ್ಳಿ ಕಿಮ್ಸಗೆ ರವಾನೆ ಮಾಡಲಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.