ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿಯಲ್ಲಿ ನಡೆದ ಕುರಿಗಾಹಿ ಮಹಿಳೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು 24 ಗಂಟೆಗಳಲ್ಲೇ ಭೇದಿಸಿರುವ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಕೊಲೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಕೈಗೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಕೇವಲ 24 ಗಂಟೆಯೊಳಗಾಗಿ ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಹಾಗೂ ಕುಂದಗೋಳ ಪೊಲೀಸ್ ಠಾಣೆ ಸಿಬ್ಬಂದಿ ಕಾರ್ಯಾಚರಣೆ ಯಶಸ್ವಿಯಾಗಿದೆ.
ಕುಂದಗೋಳದ ಯರಗುಪ್ಪಿಯಲ್ಲಿ ಕುರಿಗಾಹಿ ಮಹಿಳೆಯೊಬ್ಬರು ಕಟ್ಟಿಗೆ ತರಲು ಹೋಗಿದ್ದಾಗ ಆಕೆ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿ ಬಳಿಕ ಆಕೆಯ ಮೈಮೇಲಿನ ಬಂಗಾರದ ಆಭರಣಗಳನ್ನು ದೋಚಿ ಪರಾರಿಯಾಗಿದ್ದ ಆರೋಪಿ ಮಹಮ್ಮದ್ ಅಲಿ ಮಕ್ಬುಲಾ ಕೋಲಕಾರ ಎಂಬುವನನ್ನು ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದರು.
ಅಲ್ಲದೇ, ಮಹಿಳೆ ಮೇಲಿನ ಬಂಗಾರದ ಆಭರಣಗಳಾದ ಮಾಂಗಲ್ಯ ಸರ, ಕಿವಿಯೋಲೆ, ಕಾಲುಚೈನ್ ಸೇರಿದಂತೆ ಇತರೆ ವಸ್ತುಗಳ ಜಪ್ತಿ ಕುರಿತಂತೆ ತನಿಖೆ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ಓದಿ: ಟ್ರೆಕ್ಕಿಂಗ್ ವೇಳೆ ಬ್ರಹ್ಮಗಿರಿ ಬೆಟ್ಟದಿಂದ ಜಾರಿಬಿದ್ದ ಯುವಕ: ಹೆಲಿಕಾಪ್ಟರ್ ಮೂಲಕ ಪ್ರವಾಸಿಗನ ರಕ್ಷಣೆ