ETV Bharat / state

ಚಾಕೊಲೇಟ್ ಆಮಿಷ ತೋರಿಸಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ: ಹುಬ್ಬಳ್ಳಿಯಲ್ಲಿ ಹೋಟೆಲ್​ ಕುಕ್ ಅರೆಸ್ಟ್​

author img

By ETV Bharat Karnataka Team

Published : Oct 3, 2023, 5:26 PM IST

Updated : Oct 3, 2023, 6:10 PM IST

Sexual abuse of children: ಚಾಕೊಲೇಟ್, ಹಣದಾಸೆ ತೋರಿಸಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರತಿಷ್ಠಿತ ಹೋಟೆಲ್​ಯೊಂದರ ಕುಕ್​ನನ್ನು ಬಂಧಿಸಲಾಗಿದೆ.

Crime News
Crime News
ಹು-ಧಾ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್

ಹುಬ್ಬಳ್ಳಿ: ಚಿಕ್ಕ ಮಕ್ಕಳಿಗೆ ಚಾಕೊಲೇಟ್ ಆಮಿಷ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಹಳೇ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಪ್ರತಿಷ್ಠಿತ ಹೋಟೆಲ್​ಯೊಂದರಲ್ಲಿ ಕುಕ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಗರದ ಹೊಸೂರ ಬಳಿ ಇರುವ ಪ್ರತಿಷ್ಠಿತ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಕುಕ್​ ಅಪ್ರಾಪ್ತ ಮಕ್ಕಳಿಗೆ ಚಾಕೊಲೇಟ್​, ಹಣದಾಸೆ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಷ್ಟೇ ಅಲ್ಲದೇ ಮಕ್ಕಳನ್ನು ಬೆತ್ತಲೆಗೊಳಿಸಿ, ತಾನೇ ವಿಡಿಯೋ ಮಾಡಿ ಹಣಕ್ಕೆ ಮಾರಾಟ ಮಾಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.

ಹು-ಧಾ ಪೊಲೀಸ್ ಕಮಿಷನರ್ ಹೇಳಿದ್ದೇನು?: ಇಲ್ಲಿನ ಸಿದ್ಧಲಿಂಗೇಶ್ವರ ಕಾಲೋನಿಯಲ್ಲಿ ವಾಸ ಮಾಡ್ತಿದ್ದ ಈ ಕುಕ್​ನನ್ನು ಸ್ಥಳೀಯರೇ ಹಿಗ್ಗಾಮುಗ್ಗಾ ಥಳಿಸಿ ಹಳೇ ಹುಬ್ಬಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತಂತೆ ಹು-ಧಾ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಮಾಹಿತಿ ನೀಡಿದ್ದು, ''ಈಗಾಗಲೇ ಆರೋಪಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ'' ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಗೋಕಾಕ್​ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಬೆಳಗಾವಿ ಎಸ್ಪಿ ಹೇಳಿದ್ದೇನು?

Last Updated : Oct 3, 2023, 6:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.