ಧಾರವಾಡ: ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ವಶದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆರೋಗ್ಯ ತಪಾಸಣೆಗಾಗಿ ಪೊಲೀಸರು ಬಿಗಿ ಬಂದೋಬಸ್ತ್ ಮೂಲಕ ಧಾರವಾಡ ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾರೆ. ಈ ವೇಳೆ, ಮಾತನಾಡಿದ ಅವರು, ಇದೊಂದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸಿದ್ದಾರೆ.
ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಆರೋಗ್ಯ ತಪಾಸಣೆಗಾಗಿ ಉಪನಗರ ಪೊಲೀಸ್ ಠಾಣೆಯಿಂದ ಜಿಲ್ಲಾಸ್ಪತ್ರೆಗೆ ಕರೆತಂದಿದ್ದು, ಆರೋಗ್ಯ ತಪಾಸಣೆ ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸುವ ಸಾಧ್ಯತೆ ಇದೆ.
ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಕೊರೊನಾ ಪರೀಕ್ಷೆ ನಡೆಸಲು ಪಿಪಿಇ ಕಿಟ್ ಧರಿಸಿ ಸಿಬ್ಬಂದಿ ಒಳ ಹೋಗಿದ್ದಾರೆ.