ETV Bharat / state

ನೂತನ ಕೈಗಾರಿಕಾ ನೀತಿಯಲ್ಲಿ SC/ST ಉತ್ತೇಜನಕ್ಕೆ ಕ್ರಮ: ಜಗದೀಶ ಶೆಟ್ಟರ್ - b s yeddyurappa

ರಾಜ್ಯ ಸರ್ಕಾರವು ಶೋಷಿತರು, ದಲಿತರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತಲು ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ನೂತನ ಕೈಗಾರಿಕಾ ನೀತಿಯು ಬರುವ ನವೆಂಬರ್, ಡಿಸೆಂಬರ್ ನಲ್ಲಿ ಪ್ರಕಟವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.

ಜಗದೀಶ ಶೆಟ್ಟರ್
author img

By

Published : Oct 13, 2019, 5:31 PM IST

ಧಾರವಾಡ: 2019ರ ನೂತನ ಕೈಗಾರಿಕಾ ನೀತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಡಾ.ಪಾಪು ಸಭಾಂಗಣದಲ್ಲಿ ನಡೆದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಶೆಟ್ಟರ್​​ ಮಾತನಾಡಿದರು.

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ

ಬಸವಣ್ಣ, ಡಾ.ಬಿ.ಆರ್. ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ ಸೇರಿದಂತೆ ಎಲ್ಲಾ ಮಹನೀಯರು ಯಾವುದೇ ಜಾತಿ, ಮತಗಳಿಗೆ ಸೀಮಿತವಲ್ಲ. ಸಮಸ್ತ ಮನುಕುಲಕ್ಕೆ ಅವರ ತತ್ವ ಸಂದೇಶಗಳನ್ನು ತಲುಪಿಸಿ ಜಾಗೃತಿ ಮೂಡಿಸುವ ಆಶಯದೊಂದಿಗೆ ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ವಾಲ್ಮೀಕಿ ಜಯಂತಿಯನ್ನು ಸರ್ಕಾರದಿಂದ ಆಚರಿಸುವ ಪರಂಪರೆ ಆರಂಭವಾಯಿತು ಎಂದು ಶೆಟ್ಟರ್ ಹೇಳಿದರು.

ರಾಜ್ಯ ಸರ್ಕಾರವು ಶೋಷಿತರು, ದಲಿತರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತಲು ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ನೂತನ ಕೈಗಾರಿಕಾ ನೀತಿಯು ಬರುವ ನವೆಂಬರ್, ಡಿಸೆಂಬರ್ ನಲ್ಲಿ ಪ್ರಕಟವಾಗಲಿದೆ. ಅದರಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸಲಾಗುವುದು. ಆ ಮೂಲಕ ಡಾ.ಅಂಬೇಡ್ಕರ್ ಕಂಡ ಕನಸು ನನಸು ಮಾಡಲು ಸಾಧ್ಯವಿದೆ. ಎಸ್​​ಟಿ ಮೀಸಲಿರುವ ವಿಧಾನಸಭಾ ಕ್ಷೇತ್ರಗಳು ಕೆಲವೇ ಜಿಲ್ಲೆಗಳಲ್ಲಿ ಕೇಂದ್ರೀಕರಣವಾಗಿವೆ ಎಂದರು.

ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ಭಾರತ ಸರ್ಕಾರ ಏಕಲವ್ಯ ಮಾದರಿ ವಸತಿ ಶಾಲೆಗಳನ್ನು ವಿಶೇಷವಾಗಿ ಎಸ್​ಟಿ ಜನಾಂಗದ ವಿದ್ಯಾರ್ಥಿಗಳಿಗೆ ಪ್ರಾರಂಭಿಸಿದೆ. ದೇಶದಲ್ಲಿ ಈಗಾಗಲೇ 284 ಶಾಲೆಗಳಿವೆ. ರಾಜ್ಯದಲ್ಲಿಯೂ ವಿಶೇಷ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಈ ವೇಳೆ ವಿವಿಧ ರಂಗಗಳಲ್ಲಿ ಸಾಧನೆ ಮಾಡಿರುವ ವಾಲ್ಮೀಕಿ ಜನಾಂಗದ ಬಿ.ಮಾರುತಿ, ತಿಮ್ಮಣ್ಣ ಎಸ್. ಕ್ವಾಟಿಹಳ್ಳಿ, ಸುರೇಶಬಾಬು ತಳವಾರ, ಹನುಮಂತಪ್ಪ ಫ.ದೊಡ್ಡಮನಿ ಹಾಗೂ ಅರವಿಂದ ದೊಡ್ಡಮನಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Intro:ಧಾರವಾಡ: ಬಸವಣ್ಣ, ಡಾ.ಬಿ.ಆರ್. ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ ಸೇರಿದಂತೆ ಎಲ್ಲಾ ಮಹನೀಯರು ಯಾವುದೇ ಜಾತಿ, ಮತಗಳಿಗೆ ಸೀಮಿತವಲ್ಲ ಸಮಸ್ತ ಮನುಕುಲಕ್ಕೆ ಅವರ ತತ್ವ ಸಂದೇಶಗಳು ನಿರಂತರವಾಗಿ ಜನಸಾಮಾನ್ಯರಿಗೆ ತಲುಪಿಸಿ ಜಾಗೃತಿ ಮೂಡಿಸುವ ಆಶಯದೊಂದಿಗೆ ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ ವಾಲ್ಮೀಕಿ ಜಯಂತಿಯನ್ನು ಸರ್ಕಾರದಿಂದ ಆಚರಿಸುವ ಪರಂಪರೆ ಪ್ರಾರಂಭವಾಯಿತು. 2019 ರ ನೂತನ ಕೈಗಾರಿಕಾ ನೀತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಉತ್ತೇಜನ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದರು.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಡಾ.ಪಾಪು ಸಭಾಂಗಣದಲ್ಲಿ ಏರ್ಪಡಿಸಿದ್ದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹರ್ಷಿ ವಾಲ್ಮೀಕಿ ಹೆಸರು ತೆಗೆದುಕೊಂಡ ಕೂಡಲೇ ಶ್ರೇಷ್ಠ ಮಹಾಕಾವ್ಯ ರಾಮಾಯಣ ಎಲ್ಲರಿಗೂ ನೆನಪಾಗುತ್ತದೆ. ರಾಜ್ಯ ಸರ್ಕಾರವು ಶೋಷಿತರು, ದಲಿತರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತಲು ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ನೂತನ ಕೈಗಾರಿಕಾ ನೀತಿಯು ಬರುವ ನವೆಂಬರ್, ಡಿಸೆಂಬರ್ ನಲ್ಲಿ ಪ್ರಕಟವಾಗಲಿದೆ. ಅದರಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸಲಾಗುವುದು. ಆ ಮೂಲಕ ಡಾ.ಅಂಬೇಡ್ಕರ್ ಕಂಡ ಕನಸು ನನಸು ಮಾಡಲು ಸಾಧ್ಯವಿದೆ . ಎಸ್.ಟಿ.ಮೀಸಲಿರುವ ವಿಧಾನಸಭಾ ಕ್ಷೇತ್ರಗಳು ಕೆಲವೇ ಜಿಲ್ಲೆಗಳಲ್ಲಿ ಕೇಂದ್ರೀಕರಣವಾಗಿವೆ ಎಂದರು.

ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ,
ಭಾರತ ಸರ್ಕಾರ ಏಕಲವ್ಯ ಮಾದರಿ ವಸತಿ ಶಾಲೆಗಳನ್ನು ವಿಶೇಷವಾಗಿ ಎಸ್.ಟಿ ಜನಾಂಗದ ವಿದ್ಯಾರ್ಥಿಗಳಿಗೆ ಪ್ರಾರಂಭಿಸಿದೆ .ದೇಶದಲ್ಲಿ ಈಗಾಗಲೇ 284 ಶಾಲೆಗಳಿವೆ. ರಾಜ್ಯದಲ್ಲಿಯೂ ವಿಶೇಷ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಲಾಗುವುದು. ವಾಲ್ಮೀಕಿ ರಾಮಾಯಣ ಅನೇಕ ರೀತಿಯಲ್ಲಿ ಐತಿಹಾಸಿಕ ದಾಖಲೆಯಾಗಿ ಉಳಿದಿದೆ. ರಾಮಾಯಣದ ಪ್ರಸಂಗಗಳನ್ನು ನೋಡಿದಾಗ ಭಾರತದೇಶ ಆ ಕಾಲದಲ್ಲಿಯೇ ಇತ್ತು ಎಂಬುದಕ್ಕೆ ಸ್ಪಷ್ಟ ನಿದರ್ಶನಗಳು ಇವೆ. ರಾಮ ಎಂಬ ಹೆಸರು ದೇಶದ ಎಲ್ಲಾ ಭಾಗಗಳಲ್ಲಿಯೂ ಕಂಡು ಬರುತ್ತದೆ ಎಂದರು.Body:ವಿವಿಧ ರಂಗಗಳಲ್ಲಿ ಸಾಧನೆ ಮಾಡಿರುವ ವಾಲ್ಮೀಕಿ ಜನಾಂಗದ ಬಿ.ಮಾರುತಿ, ತಿಮ್ಮಣ್ಣ ಎಸ್. ಕ್ವಾಟಿಹಳ್ಳಿ, ಸುರೇಶಬಾಬು ತಳವಾರ, ಹನುಮಂತಪ್ಪ ಫ.ದೊಡ್ಡಮನಿ ಹಾಗೂ ಅರವಿಂದ ದೊಡ್ಡಮನಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಮಾಜಿ ಸಭಾಪತಿ ‌ಬಸವರಾಜ ಹೊರಟ್ಟಿ ಮಾತನಾಡಿದರು. ಜಿಲ್ಲಾಧಿಕಾರಿ ದೀಪಾ ಚೋಳನ್ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು ಭಾಗವಹಿಸಿದ್ದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.