ETV Bharat / state

ಶಾಸಕ ಅಬ್ಬಯ್ಯಗೆ ಸಚಿವ ಸ್ಥಾನ ನೀಡುವಂತೆ ಕಾರ್ಯಕರ್ತರ ಪಟ್ಟು: ಮಠದಲ್ಲಿ ಪೂಜೆ ಸಲ್ಲಿಸಿದ ಬೆಂಬಲಿಗರು

ಹುಬ್ಬಳ್ಳಿಯ ಮೂರುಸಾವಿರ ಮಠದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೂಜೆ ಸಲ್ಲಿಸಿ ಶಾಸಕ ಪ್ರಸಾದ್​ ಅಬ್ಬಯ್ಯಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.

ಹುಬ್ಬಳ್ಳಿಯ ಮೂರುಸಾವಿರ ಮಠ
ಹುಬ್ಬಳ್ಳಿಯ ಮೂರುಸಾವಿರ ಮಠ
author img

By

Published : May 16, 2023, 5:30 PM IST

ಪ್ರಸಾದ್ ಅಬ್ಬಯ್ಯ ಅಬಿಮಾನಿಗಳ ಸಂಘದ ಅಧ್ಯಕ್ಷ ಪ್ರಕಾಶ ಹುಬ್ಬಳ್ಳಿ ಅವರು ಮಾತನಾಡಿದರು

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಿಂದ‌ ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಪ್ರಸಾದ್​ ಅಬ್ಬಯ್ಯಗೆ ಸಚಿವ ಸ್ಥಾನ ನೀಡುವಂತೆ ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ನೆರವೇರಿಸಿದರು.

ಈಗಾಗಲೇ ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದಲ್ಲಿ ಸತತ ಮೂರು ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರಸಾದ ಅಬ್ಬಯ್ಯಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್​ಗೆ ಒತ್ತಾಯಿಸಿದರು. ಧಾರವಾಡ ಜಿಲ್ಲೆಯಲ್ಲಿ ಬಹುತೇಕ ಕಡೆಯಲ್ಲಿ ಶಾಸಕ ಪ್ರಸಾದ್​ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾರ್ಯಕರ್ತರು ಒತ್ತಾಯಿಸಿದರು.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಪ್ರಸಾದ್ ಅಬ್ಬಯ್ಯ ಅಭಿಮಾನಿಗಳ ಸಂಘದ ಅಧ್ಯಕ್ಷ ಪ್ರಕಾಶ್ ಹುಬ್ಬಳ್ಳಿ ಕೂಡ ಒತ್ತಾಯಿಸಿದರು.

ಅಬ್ಬಯ್ಯ ಹ್ಯಾಟ್ರಿಕ್ ಗೆಲುವು : ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಬ್ಬಯ್ಯ ಅವರು ಕಳೆದ 10 ವರ್ಷಗಳಲ್ಲಿ ಹು-ಧಾ ಪೂರ್ವ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಈ ನಿಟ್ಟಿನಲ್ಲಿ ಈ ಹಿಂದೆ ಮಾಜಿ ಸಚಿವರಾದ ಎ ಎಂ ಹಿಂಡಸಗೇರಿ ಅವರು ಜಬ್ಬರಖಾನ್ ಹೊನ್ನಾಳಿಯವರು ಎರಡೆರಡು ಬಾರಿ ಶಾಸಕರಾಗಿ ಗೆಲುವು ಸಾಧಿಸಿದ್ದಾರೆ. ಆದರೆ ಅಬ್ಬಯ್ಯ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು, ಕ್ಷೇತ್ರದಲ್ಲಿ ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹೇಳಿದರು.

ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡದೆ ಹೋದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ಮತ್ತೊಂದೆಡೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಹು-ಧಾ ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳಿ ಮುಖಂಡ ಗುರುನಾಥ ಉಳ್ಳಿಕಾಶಿ, ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಅವರು ಹ್ಯಾಟ್ರಿಕ್ ಗೆಲುವು ಸಾಧಿಸಿ ವಿಶೇಷ ಸಾಧನೆ ಮಾಡಿದ ಅವರಿಗೆ ಸಚಿವರನ್ನಾಗಿ ಮಾಡಿ ಪ್ರಬಲ ಖಾತೆ ನೀಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ಪರಮೇಶ್ವರ ಅವರನ್ನೂ ಪರಿಗಣಿಸಿ: ತುಮಕೂರಿನಲ್ಲಿ ಬೆಂಬಲಿಗರಿಂದ ಬೃಹತ್​ ಪ್ರತಿಭಟನೆ

ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹ: ಅಬ್ಬಯ್ಯ ಅವರು 2013, 2018 ಹಾಗೂ 2023ರ ಚುನಾವಣೆಯಲ್ಲಿ ನಿರಂತರವಾಗಿ ಬಹುಮತದೊಂದಿಗೆ ಗೆಲುವು ಸಾಧಿಸಿದ್ದು, ಕಿತ್ತೂರು ಕರ್ನಾಟಕದ ಭಾಗದ ಪ್ರಮುಖ ಪರಿಶಿಷ್ಟ ಕ್ಷೇತ್ರದ ನಾಯಕರಾಗಿ ಅವರು ಹೊರಹೊಮ್ಮಿದ್ದು, ಪಕ್ಷದ ಹೈಕಮಾಂಡ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಆಗ್ರಹಿಸಿದರು.

ಅವರು ಅಭಿವೃದ್ಧಿಪರ, ನಾಯಕತ್ವವನ್ನು ಮೀಸಲು ಕ್ಷೇತ್ರವನ್ನಾಗಿ ಪರಿಗಣಿಸಿ ಪಕ್ಷ ನೂತನವಾಗಿ ರಚಿಸುವ ಸರ್ಕಾರದ ಮಂತ್ರಿಮಂಡಲದಲ್ಲಿ ನಿಷ್ಠಾವಂತವಾಗಿರುವ ಅವರಿಗೆ ಪ್ರಥಮ ಪ್ರಾಶಸ್ತ್ಯದ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಚುನಾವಣಾ ಸೋಲಿನ ಪರಾಮರ್ಶೆ ಮಾಡಿದ್ದೇವೆ, ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇವೆ: ಬಸವರಾಜ ಬೊಮ್ಮಾಯಿ‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.