ಹುಬ್ಬಳ್ಳಿ: ನಗರದ ಈದ್ಗಾ ಮೈದಾನ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗುವ ಲಕ್ಷಣಗಳು ಗೋಚರಿಸುತ್ತಿವೆ. ತೀವ್ರ ಆರೋಪ ಹಾಗೂ ಪ್ರತ್ಯಾರೋಪದ ನಡುವೇ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಸಾಕಷ್ಟು ಸುದ್ದಿಯಾಗಿತ್ತು.
ಇದೀಗಾ ಈದ್ಗಾದಲ್ಲಿ 272ನೇ ಟಿಪ್ಪು ಜಯಂತಿಯನ್ನು ಆಚರಣೆ ಮಾಡಲು ಅವಕಾಶ ನೀಡಬೇಕು ಎಂದು AIMIM ಹಾಗೂ ಸಮತಾ ಸೈನಿಕ ದಳ ಕಾರ್ಯಕರ್ತರು ಹಾಗೂ ಕೆಲ ಸಂಘಟನೆಗಳು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಮಾಡಿವೆ.
ನಗರದ ಹೃದಯ ಭಾಗದಲ್ಲಿರುವ ಹಾಗೂ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿತ್ತು. ಇದೀಗ ಟಿಪ್ಪು ಜಯಂತಿಗೂ ಅವಕಾಶ ಕೊಡಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ.
ಇದನ್ನೂ ಓದಿ: ಜಿಮ್ನಲ್ಲಿನ ಪ್ರಸ್ತಾವಿತ ಹೂಡಿಕೆ ಯೋಜನೆಗಳ ತ್ವರಿತ ಜಾರಿಗೆ ಸಮನ್ವಯ ಸಮಿತಿ ರಚನೆ: ಸಚಿವ ನಿರಾಣಿ