ETV Bharat / state

ತೈಲ ದರ ಏರಿಕೆ ಖಂಡಿಸಿ ಪ್ರತಿಭಟನೆ: ಕೇಂದ್ರದ ವಿರುದ್ಧ ಆಕ್ರೋಶ - latest news at hubli

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಎಐಟಿಯುಸಿ ಮತ್ತು ಸಿಐಟಿಯು ಸಂಘಟನೆ ಕಾರ್ಯಕರ್ತರು ತಹಶೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

protest
ತೈಲ ದರ ಏರಿಕೆ ಖಂಡಿಸಿ ಪ್ರತಿಭಟನೆ
author img

By

Published : Jun 24, 2020, 2:40 PM IST

ಹುಬ್ಬಳ್ಳಿ: ಕಳೆದ ಹದಿನೈದು ದಿನಗಳಿಂದ ನಿರಂತರವಾಗಿ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಎಐಟಿಯುಸಿ ಮತ್ತು ಸಿಐಟಿಯು ಸಂಘಟನೆ ವತಿಯಿಂದ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ನಗರದ ತಹಶೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ವಿಶ್ವದಾದ್ಯಂತ ಕೊರೊನಾ ಮಹಾಮಾರಿಯಿಂದ ಜನ ತತ್ತರಿಸಿ ಹೋಗಿದ್ದು, ಲಾಕ್​ಡೌನ್​ನಿಂದಾಗಿ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ.

ತೈಲ ದರ ಏರಿಕೆ ಖಂಡಿಸಿ ಪ್ರತಿಭಟನೆ

ಜನಸಾಮಾನ್ಯರ ಬದುಕು ದುಸ್ತರವಾಗಿದ್ದು, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಪೆಟ್ರೋಲಿಯಂ ಕಂಪನಿಗಳ ಮೇಲೆ ಯಾವುದೇ ಕ್ರಮ ಕೈಗೊಳ್ಳದೆ ದಿನನಿತ್ಯ ಪೆಟ್ರೋಲ್ ಮತ್ತು ಡೀಸೆಲ್​ ದರಗಳನ್ನು ಏರಿಕೆ ಮಾಡುತ್ತಲೇ ಇದೆ. ಇದರಿಂದ ನೇರವಾಗಿ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಾಮಾನ್ಯ ಜನರಿಗೆ ಕೈಗೆಟುಕುವ ದರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿಗದಿ ಮಾಡಬೇಕೆಂದು ತಹಶೀಲ್ದಾರರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.