ಧಾರವಾಡ: ವೀರಶೈವ ಲಿಂಗಾಯತ ಸಮಾಜವನ್ನು ಹಿಂದುಳಿದ ವರ್ಗದ ಒಬಿಸಿ ಪಟ್ಟಿಗೆ ಸೇರಿಸಲು ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಧರಣಿ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಸಮಾಜದ ಮುಖಂಡರು, ಕೇಂದ್ರ ಹಾಗೂ ರಾಜ್ಯ ಸರ್ಕಾರದಕ್ಕೆ ಮನವಿ ಸಲ್ಲಿಸಲಿದ್ದಾರೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. ಕೇಂದ್ರ ಸರ್ಕಾರ ಪಟ್ಟಿಯಲ್ಲಿ ವೀರಶೈವ ಲಿಂಗಾಯತ ಸಮುದಾಯವನ್ನು ಕೈ ಬಿಟ್ಟಿರುವುದು ಸಮಾಜದ ಬಡ ಯುವ ಜನರು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಿಂದ ವಂಚಿತರಾಗುವಂತೆ ಮಾಡಿದೆ ಎಂದು ಧರಣಿನಿರತರು ಆರೋಪಿಸಿದರು.
ರಾಜ್ಯದಲ್ಲಿ ಕಳೆದ 70 ವರ್ಷದಿಂದ ವೀರಶೈವ ಲಿಂಗಾಯತ ಸಮಾಜವನ್ನು ಇತರೆ ಹಿಂದುಳಿದ ವರ್ಗ ಎಂದು ಪರಿಗಣಿಸಿದರೂ ಕೇಂದ್ರ ಪಟ್ಟಿಯಲ್ಲಿ ಕರ್ನಾಟಕಕ್ಕೆ ಸಂಬಂಧಿಸಿದಂತೆ ಈ ಸಮುದಾಯವನ್ನು ಕೈ ಬಿಟ್ಟಿರುವುದು ಘೋರ ಅನ್ಯಾಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.