ಹುಬ್ಬಳ್ಳಿ: ಪತ್ನಿಗೆ ಕಿರುಕುಳ ನೀಡಿದ ಆರೋಪದಡಿ ಕಾಂಗ್ರೆಸ್ ಮುಖಂಡ ಗಿರೀಶ್ ಗದಿಗೆಪ್ಪಗೌಡರ ವಿರುದ್ಧ ಪ್ರಕರಣ ದಾಖಲಾಗಿದೆ. ಗಿರೀಶ್ ಗದಿಗೆಪ್ಪಗೌಡರ ಇತ್ತೀಚೆಗೆ ಸ್ನೇಹಿತರೊಂದಿಗೆ ಬಂದು ನನ್ನ ತವರು ಮನೆಯವರ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ.
ಅಲ್ಲದೇ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಪತ್ನಿ ಜಯಲಕ್ಷ್ಮಿ ಗದಿಗೆಪ್ಪಗೌಡ ಪತಿ ಸೇರಿ ಐವರ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಹರ್ಷವರ್ಧನ ಮಲಕ್ಕಣ್ಣವರ, ಪ್ರೀತಿ ಹೊನಗೌಡ, ಮೈತ್ರಾಣಿ ಗದಿಗೆಪ್ಪಗೌಡರ, ನಿಲಕಂಠ ಮಲಕ್ಕಣ್ಣವರ ಮತ್ತು ಕುಮಾರ ಮಲಗಾರ ಎಲ್ಲರೂ ಸೇರಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಮತ್ತು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಪೊಲೀಸರ ವಿರುದ್ಧ ಅಸಮಾಧಾನ.. ಆತ್ಮಹತ್ಯೆ ಮಾಡಿಕೊಳ್ಳಲು ಸರಸರನೇ ಟವರ್ ಏರಿದ ಭೂಪ..! ಮುಂದೆ...?