ETV Bharat / state

ಸಂಗೀತ, ನೃತ್ಯ ಸೇರಿ ವಿವಿಧ ಕೋರ್ಸ್​ಗಳನ್ನು ರಾಜ್ಯವ್ಯಾಪಿ ನಡೆಸಲು ಮುಂದಾದ ವಿವಿ: ರಾಜ್ಯಪಾಲರ ಅನುಮೋದನೆ - ಈಟಿವಿ ಭಾರತ್​ ಕನ್ನಡ ನ್ಯೂಸ್​

ಸಂಗೀತ, ನೃತ್ಯ ಮತ್ತು ಪ್ರದರ್ಶಕ ಕಲೆಗಳ ಕೋರ್ಸ್​ಗಳನ್ನು ರಾಜ್ಯವ್ಯಾಪಿ ನಡೆಸಲು ಸಂಸ್ಥೆಗಳಿಗೆ ಅವಕಾಶವಿದೆ ಎಂದು ಪ್ರೊ. ನಾಗೇಶ್ ವಿ.ಬೆಟ್ಟಕೋಟೆ ಹೇಳಿದ್ದಾರೆ.

ಪ್ರೊ.ನಾಗೇಶ್ ವಿ.ಬೆಟ್ಟಕೋಟೆ
ಪ್ರೊ.ನಾಗೇಶ್ ವಿ.ಬೆಟ್ಟಕೋಟೆ
author img

By

Published : Jul 20, 2023, 10:16 PM IST

ಸಂಗೀತ, ನೃತ್ಯ ಮತ್ತು ಪ್ರದರ್ಶಕ ಕಲೆಗಳ ಕೋರ್ಸ್​ಗಳನ್ನು ರಾಜ್ಯವ್ಯಾಪ್ತಿ ನಡೆಸಲು ಸಂಸ್ಥೆಗಳಿಗೆ ಅವಕಾಶ

ಹುಬ್ಬಳ್ಳಿ : ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕೇಂದ್ರ ಸ್ಥಾನದಲ್ಲಿ ಮಾತ್ರ ನಡೆಸುತ್ತಿದ್ದ ಕೋರ್ಸ್​ಗಳನ್ನು ರಾಜ್ಯವ್ಯಾಪಿ ನಡೆಸಲು ಸಂಸ್ಥೆಗಳಿಗೆ ಅವಕಾಶವಿದೆ. ವಿಶ್ವ ವಿದ್ಯಾಲಯದೊಡನೆ ರಾಜ್ಯದ ಯಾವುದೇ ನೋಂದಾಯಿತ ಶಿಕ್ಷಣ ಸಂಸ್ಥೆಗಳು ಒಡಂಬಡಿಕೆ ಮಾಡಿಕೊಂಡು ಸಂಗೀತ, ನೃತ್ಯ ಮತ್ತು ಮತ್ತು ಪ್ರದರ್ಶಕ ಕಲೆಗಳ ಕೋರ್ಸುಗಳನ್ನು ನಡೆಸಲು ಅನುವಾಗುವ ಪರಿನಿಯಮಗಳಿಗೆ ರಾಜ್ಯಪಾಲರ ಅಂಕಿತ ದೊರಕಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ನಾಗೇಶ್ ವಿ.ಬೆಟ್ಟಕೋಟೆ ಅವರು, ಈಗಾಗಲೇ ರಾಜ್ಯದ ಏಳು ಶಿಕ್ಷಣ ಸಂಸ್ಥೆಗಳು ವಿಶ್ವವಿದ್ಯಾಲಯದೊಡನೆ ಒಡಂಬಡಿಕೆ ಮಾಡಿಕೊಂಡು ಕೋರ್ಸ್​ ಗಳನ್ನು ನಡೆಸುತ್ತಿವೆ.‌ ಅಂತಾರಾಷ್ಟ್ರೀಯ ವೈಯಲಿನ್ ವಾದಕರು, ಪದ್ಮ ಭೂಷಣ ಪ್ರಶಸ್ತಿ ಪುರಸ್ಕೃತರಾದ ಡಾ. ಎಲ್. ಸುಬ್ರಹ್ಮಣ್ಯಂ ಅವರು ತಮ್ಮ ಗ್ಲೋಬಲ್ ಸೆಂಟರ್ ಫಾರ್ ಎಕ್ಸಲೆನ್ಸ್ ಸಂಸ್ಥೆಯಲ್ಲಿ ಸಂಗೀತ ಕೋರ್ಸ್, ನೃತ್ಯ ಕಲಾವಿದೆ ಡಾ. ಅನುರಾಧ ವಿಕ್ರಾಂತ್ ಅವರು ತಮ್ಮ ದೃಷ್ಟಿ ಆರ್ಟ್ ಸೆಂಟರ್‌ ನಲ್ಲಿ ನೃತ್ಯಕ್ಕೆ ಸಂಬಂಧಿಸಿದ ಕೋರ್ಸ್ ಹಾಗೂ ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಎಂಇಎಸ್ ಶಿಕ್ಷಣ ಸಂಸ್ಥೆ ಮತ್ತು ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಗಳು ನಾಟಕದ ಕೋರ್ಸ್​ಗಳನ್ನು ನಡೆಸಲು ಒಡಂಬಡಿಕೆ ಮಾಡಿ ಕೊಂಡಿರುತ್ತವೆ.

ರಾಜ್ಯ ಸರ್ಕಾರದ ಅನುದಾನಿತ ಶಿಕ್ಷಣ ಸಂಸ್ಥೆಯಾದ ಕರ್ನಾಟಕ ಜಾನಪದ ಪರಿಷತ್ತು ಕೂಡ ಜಾನಪದ ಕಲೆಗಳಲ್ಲಿ ಕೋರ್ಸ್​ಗಳನ್ನು ನಡೆಸಲು ಒಡಂಬಡಿಕೆ ಮಾಡಿಕೊಳ್ಳುತ್ತಿದೆ. ಇನ್ನೂ ಹತ್ತಾರು ಶಿಕ್ಷಣ ಸಂಸ್ಥೆಗಳು ಸಂಗೀತ, ನೃತ್ಯ ಮತ್ತು ಪ್ರದರ್ಶಕ ಕಲೆಗಳ ಕೋರ್ಸುಗಳನ್ನು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ನಡೆಸಲು ಅರ್ಜಿಗಳನ್ನು ಸಲ್ಲಿಸಿವೆ. 2023-24ನೇ ಶೈಕ್ಷಣಿಕ ಸಾಲಿನಿಂದಲೇ ಈ ಸಂಸ್ಥೆಗಳಿಗೆ ಕೋರ್ಸ್ ನಡೆಸಲು ಅನುಮತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರವು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುತ್ತಿದ್ದ ಸಂಗೀತ ಪರೀಕ್ಷೆ ಹಾಗೂ ಪ್ರದರ್ಶಕ ಕಲೆಗಳ ನೃತ್ಯ ಮತ್ತು ತಾಳ ವಾದ್ಯಗಳಲ್ಲಿ ಜೂನಿಯರ್, ಸೀನಿಯರ್ ಮತ್ತು ವಿದ್ವತ್‌ ಪರೀಕ್ಷೆಗಳನ್ನು ನಡೆಸುವ ಮತ್ತು ಪ್ರಮಾಣ ಪತ್ರಗಳನ್ನು ನೀಡುವ ಸಂಪೂರ್ಣ ಜವಾಬ್ದಾರಿಯನ್ನು ವಿಶ್ವವಿದ್ಯಾಲಯಕ್ಕೆ ನೀಡಿದೆ. ಪಠ್ಯ ಕ್ರಮಗಳಲ್ಲಿ ಉತ್ತಮ ಗುಣಮಟ್ಟವನ್ನು ಕಾಯ್ದುಕೊಳ್ಳುವುದರ ಜೊತೆಗೆ ಆಧುನಿಕ ತಾಂತ್ರಿಕತೆಯನ್ನು ಸದ್ಬಳಕೆ ಮಾಡಿಕೊಂಡು ಪಾರದರ್ಶಕತೆಯಿಂದ ಪರೀಕ್ಷೆಗಳನ್ನು ವಿಶ್ವವಿದ್ಯಾಲಯದಲ್ಲಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಮುಂಬರುವ ದಿನಗಳಲ್ಲಿ ವಿದ್ವಾಂಸರೊಡನೆ ಸಂವಾದ ನಡೆಸಿ ಪರೀಕ್ಷೆಗಳನ್ನು ನಡೆಸುವ ದಿನಾಂಕವನ್ನು ನಿಗದಿಪಡಿಸಲಾಗುವುದು. ಹಾಗೂ ಸರ್ಕಾರವು ವಿಶ್ವವಿದ್ಯಾಲಯದ ಅಭಿವೃದ್ಧಿಗೆ ರೂ.300 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. ಈಗಾಗಲೇ ವಿಶ್ವವಿದ್ಯಾಲಯದಲ್ಲಿ ಪೂರ್ಣ ಪ್ರಮಾಣ ಬೋಧಕರಿದ್ದು, ಉಳಿದ ಸಿಬ್ಬಂದಿಗಳ ಖಾಯಂ ನೇಮಕಾತಿ ಕುರಿತು ಸರ್ಕಾರಕ್ಕೆ ತಿಳಿಸಲಾಗುವುದು. ಎಂದು ಪ್ರೊ.ನಾಗೇಶ್ ಹೇಳಿದರು.

ಇದನ್ನೂ ಓದಿ : ಮೈಸೂರು ವಿವಿಗೆ ಕುಲಪತಿಯಾಗಿ ಲೋಕನಾಥ್‌ ನೇಮಕ: ತಡೆ ತೆರವಿಗೆ ಹೈಕೋರ್ಟ್ ನಿರಾಕರಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.