ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಟ್ರಾಫಿಕ್ ಸಮಸ್ಯೆ ಮಿತಿ ಮೀರಿ ಬೆಳೆಯುತ್ತಿದ್ದು, ಕೊಪ್ಪಿಕರ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾದ ಪರಿಣಾಮ ಟ್ರಾಫಿಕ್ನಲ್ಲಿ ಸಿಲುಕಿಕೊಂಡು ಆ್ಯಂಬುಲೆನ್ಸ್ವೊಂದು ಪರದಾಡಿದೆ.
ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯಲ್ಲಿ ಎರಡೂ ಬದಿಯಿಂದ ಬರುವ ವಾಹನಗಳ ಮಧ್ಯೆ ನುಸುಳಿಕೊಂಡು ಹೋಗುವಲ್ಲಿ ಆ್ಯಂಬುಲೆನ್ಸ್ ಪರದಾಡಿದೆ. ದಿನದಿಂದ ದಿನಕ್ಕೆ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕುವಂತ ಸ್ಥಿತಿ ನಿರ್ಮಾಣವಾಗಿದೆ. ಜನತೆ ಬೆಂಗಳೂರಿನ ಟ್ರಾಫಿಕ್ ನೋಡಿ ಹುಬ್ಬಳ್ಳಿ ಟ್ರಾಫಿಕ್ ತುಂಬಾ ಕಡಿಮೆ ಎಂದು ಹೇಳುತ್ತಿದ್ದರು. ಆದರೆ ಈಗಿನ ದಿನಗಳಲ್ಲಿ ಹುಬ್ಬಳ್ಳಿ, ಬೆಂಗಳೂರು ಮಹಾನಗರವನ್ನು ಟ್ರಾಫಿಕ್ನಲ್ಲಿ ಹಿಂದಿಕ್ಕುವ ರೀತಿಯಲ್ಲಿ ಕಾಣುತ್ತಿದೆ.