ETV Bharat / state

ಏ.1 ರಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ, ಏ. 5ರಂದು ಕರ್ನಾಟಕಕ್ಕೆ ಪ್ರಧಾನಿ ಬರುವ ನಿರೀಕ್ಷೆ : ಬಸವರಾಜ ಬೊಮ್ಮಾಯಿ - ಏಪ್ರಿಲ್ 5 ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ

ಇಂದು ನನ್ನ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ತೆರಳುತ್ತಿದ್ದೇನೆ. ಬಜೆಟ್​ನಲ್ಲಿ ಘೋಷಣೆಯಾದ ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ವಿಶೇಷ ಸಮಿತಿ ರಚನೆ ಮಾಡಲಾಗಿದೆ. ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದೇವೆ..

Basavaraj Bommai
ಹುಬ್ಬಳ್ಳಿ ವಿಮಾನ‌ ನಿಲ್ದಾಣದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ
author img

By

Published : Mar 26, 2022, 12:46 PM IST

ಹುಬ್ಬಳ್ಳಿ : ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಕೇಂದ್ರ ಗೃಹ ಸಚಿವ ಹಾಗೂ ರಾಷ್ಟ್ರೀಯ ಬಿಜೆಪಿ ನಾಯಕ ಅಮಿತ್ ಶಾ ಮುಂದಿನ ವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 1ರಂದು ನಡೆಯುವ ಸಹಕಾರಿ ಇಲಾಖೆಯ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ‌ವಿಮಾನ‌ ನಿಲ್ದಾಣದಲ್ಲಿ ಮಾತನಾಡಿದ ಅವರು, ವಿದೇಶಿ ಬಂಡವಾಳ ಆಕರ್ಷಣೆಯಲ್ಲಿ ರಾಜ್ಯ ನಂಬರ್ 1 ಆಗಿದೆ. ಕಳೆದ ಮೂರು ತ್ರೈಮಾಸಿಕ ಅವಧಿಯಲ್ಲಿ ನಾವೇ ನಂಬರ್ ಒನ್ ಇದ್ದೇವೆ. ಏಪ್ರಿಲ್ ಒಂದಕ್ಕೆ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಕ್ಷೀರ ಬ್ಯಾಂಕ್, ಯಶಸ್ವಿನಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಏಪ್ರಿಲ್ 5ರಂದು ನರೇಂದ್ರ ಮೋದಿ ರಾಜ್ಯಕ್ಕೆ‌ ಬರುವ ನಿರೀಕ್ಷೆ ಇದೆ. ಪ್ರಧಾನಮಂತ್ರಿಗಳು ರಾಜ್ಯಕ್ಕೆ ಭೇಟಿ‌ ನೀಡುವುದು ಇನ್ನೂ ಅಧಿಕೃತವಾಗಿಲ್ಲ ಎಂದರು.

ಹುಬ್ಬಳ್ಳಿ ವಿಮಾನ‌ ನಿಲ್ದಾಣದಲ್ಲಿ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ

ಇಂದು ನನ್ನ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ತೆರಳುತ್ತಿದ್ದೇನೆ. ಬಜೆಟ್​ನಲ್ಲಿ ಘೋಷಣೆಯಾದ ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ವಿಶೇಷ ಸಮಿತಿ ರಚನೆ ಮಾಡಲಾಗಿದೆ. ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದೇವೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನವೆಂಬರ್​ನಲ್ಲಿ‌ ಕೈಗಾರಿಕಾ ಸಚಿವರ ನೇತೃತ್ವದಲ್ಲಿ ನಡೆಯಲಿದ್ದು, ಅದರ ಸಿದ್ಧತೆ ಭರದಿಂದ ಸಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮದುವೆಯಲ್ಲಿ ನೃತ್ಯ ಮಾಡುತ್ತಿದ್ದ ಮಹಿಳೆಯರ ಮೇಲೆ ಹರಿದ ಟ್ರಕ್​.. ಮೂವರ ಸಾವು - ಐವರಿಗೆ ಗಾಯ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.