ಧಾರವಾಡ : ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ನಡೆಸಲು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಶಿಕ್ಷಣ ನೀತಿ-2016 ಹಾಗೂ ಕೇಂದ್ರ ಶಿಕ್ಷಣ ನೀತಿ- 2020ರ ಅಡಿ ಎಲ್‌ಕೆಜಿ-ಯುಕೆಜಿ ಆರಂಭಿಸುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ.
ಆದರೆ, ಈ ತರಗತಿಗಳನ್ನು ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ನಡೆಸುವುದರಿಂದ ಅಂಗನವಾಡಿ ಕೇಂದ್ರಗಳನ್ನು ಮುಚ್ಚುವ ಸಂದಿಗ್ಧತೆ ಎದುರಾಗಲಿದೆ. ಇದರಿಂದಾಗಿ ಲಕ್ಷಾಂತರ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿರು ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಿದೆ ಎಂದು ಅಳಲು ತೋಡಿಕೊಂಡರು.
ಇನ್ನು, ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಆರಂಭ ಮಾಡಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.