ಧಾರವಾಡ: ಬೆಳಗಾವಿ ಸುವರ್ಣಸೌಧದ ಎದುರು ಪ್ರತಿಭಟನೆ ನಡೆಸಲು ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರಿದ್ದ ಬಸ್ಗೆ ಲಾರಿ ಡಿಕ್ಕಿಯಾಗಿ 7 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ತೇಗೂರು ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ.
ವಿವಿಧ ಬೇಡಿಕೆ ಈಡೇರಿಸಬೇಕೆಂದು ಕೋರಿ ಬಳ್ಳಾರಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಬಸ್ ಮೂಲಕ ಬೆಳಗಾವಿ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸಲು ಹೊರಟಿದ್ದರು. ಈ ವೇಳೆ, ಜಿಲ್ಲೆಯ ತೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ಗೆ ಲಾರಿ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ 6 ರಿಂದ 7 ಮಂದಿ ಅಂಗನವಾಡಿ ಕಾರ್ಯಕರ್ತೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಓದಿ: ಮೈಸೂರು ಇತಿಹಾಸದಲ್ಲೇ ಮೊದಲ ಮಹಿಳಾ ಎಸ್ಪಿ: ಅಧಿಕಾರ ಸ್ವೀಕರಿಸಿದ ಸೀಮಾ ಲತ್ಕರ್