ಹುಬ್ಬಳ್ಳಿ: ತಮ್ಮ ರಾಜ್ಯಗಳಿಗೆ ಹೋಗಲು ಹರಸಾಹಸ ಪಡುತ್ತಿರುವ ಬೇರೆ ಬೇರೆ ರಾಜ್ಯಗಳ ವಲಸೆ ಕಾರ್ಮಿಕರನ್ನು ನಗರದ ಹೊಸ ಬಸ್ ನಿಲ್ದಾಣದಲ್ಲಿ ಇಂದು ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನೀಲ್ ಕುಮಾರ್ ಪಾಟೀಲ್ ಭೇಟಿ ಮಾಡಿ, ದಿನಸಿ ಕಿಟ್ಗಳನ್ನು ನೀಡಿದರು.
ಈ ವೇಳೆ ಮಾತನಾಡಿದ ಅವರು, ಎರಡು ತಿಂಗಳುಗಳಿಂದ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರನ್ನು ಅವರ ರಾಜ್ಯಗಳಿಗೆ ಕಳುಹಿಸಲು ಬಸ್ ಸೇವೆಗಾಗಿ ಪ್ರತಿಯೊಬ್ಬರಿಗೆ ಅಂದಾಜು 6ರಿಂದ 12 ಸಾವಿರ ರೂಪಾಯಿಗಳವರೆಗೂ ಕಾರ್ಮಿಕರು ರಾಜ್ಯ ಸರ್ಕಾರಕ್ಕೆ ಪಾವತಿಸಬೇಕಾಗಿದೆ. ಇದು ಖಂಡನೀಯವಾಗಿದ್ದು, ರಾಜ್ಯ ಸರ್ಕಾರ ವಲಸೆ ಕಾರ್ಮಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಅವರನ್ನು ತಮ್ಮ ಊರುಗಳಿಗೆ ಕಳುಹಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.