ಹುಬ್ಬಳ್ಳಿ: ಇಲ್ಲಿನ ಅಣ್ಣಿಗೇರಿ ಪಟ್ಟಣದ ಗೋಲ್ಡನ್ ಕರಾಟೆ ಸ್ಪೋರ್ಟ್ಸ್ ಅಸೋಸಿಯೇಷನ್ ಪಟುಗಳು ಮಾರ್ಷಲ್ ಆರ್ಟ್ಸ್ನ ಸ್ಕಾಯ್ ಸ್ಪರ್ಧೆಯಲ್ಲಿ ಸಾಧನೆ ಮಾಡಿದ್ದು ಜಿಲ್ಲೆಯ ಕೀರ್ತಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ.
ಕೆಲವು ದಿನಗಳ ಹಿಂದೆ ಅಣ್ಣಿಗೇರಿಯಲ್ಲಿ ನಡೆದ ಸ್ಕಾಯ್ ಸ್ಪರ್ಧೆಯಲ್ಲಿ 24 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು. ಜನವರಿ 27ರಂದು ಹರಿಹರದಲ್ಲಿ ನಡೆದ ಸ್ಕಾಯ್ ಸ್ಪರ್ಧೆಯಲ್ಲಿ ಹತ್ತು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ, ರಾಜಸ್ಥಾನದಲ್ಲಿ ನಡೆದ ಸ್ಪರ್ಧೆಯಲ್ಲಿ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದು ಕರ್ನಾಟಕದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಓದಿ: ಈ ದೇಶದ ಪ್ರಧಾನಿಯೇ RSSನವರು, ಆ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ: ಸದನದಲ್ಲಿ ಸಿಎಂ ಗರಂ
ಈಶ್ವರಿ ಬಾಕಳೆ 14 ವರ್ಷದೊಳಗಿನ 29 ಕೆಜಿ ವಿಭಾಗದಲ್ಲಿ ದ್ವಿತೀಯ, ಭರತ ಹೂಗಾರ 18 ವರ್ಷದೊಳಗಿನ 40 ಕೆಜಿ ವಿಭಾಗದಲ್ಲಿ ದ್ವಿತೀಯ, ಅಜಯ ಹಣಸಿ 14 ವರ್ಷದೊಳಗಿನ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು, ಸುಮತಿ ನಾಗರಾಳ 18 ವರ್ಷದೊಳಗಿನ 52 ಕೆಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ಮಾಡುವುದು ಸಾಮಾನ್ಯವಾಗಿದೆ. ಆದರೆ, ಜಿಲ್ಲೆಯ ವಿದ್ಯಾರ್ಥಿಗಳು ತಮ್ಮಲ್ಲಿರುವ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಸಮಾಜಕ್ಕೆ ಪರಿಚಯಿಸುವ ಮೂಲಕ ಧಾರವಾಡ ಜಿಲ್ಲೆಯ ಕೀರ್ತಿಯನ್ನು ರಾಷ್ಟ್ರವ್ಯಾಪಿ ಪಸರಿಸುವಂತೆ ಮಾಡಿದ್ದಾರೆ.