ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಹೆಮ್ಮಾರಿ ಕೊರೊನಾಗೆ ಮತ್ತೊಂದು ಬಲಿಯಾಗಿದೆ.
ಹುಬ್ಬಳ್ಳಿಯ ಉಣಕಲ್‌ನ 71 ವರ್ಷದ ವೃದ್ಧೆ ಕೊರೊನಾಗೆ ಪ್ರಾಣ ಕಳೆದುಕೊಂಡಿದ್ದಾರೆ. ಇವರಿಗೆ ಕೆಮ್ಮು, ನೆಗಡಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಜೂನ್ 12 ರಂದು ಇವರ ವರದಿ ಪಾಸಿಟಿವ್ ಬಂದಿತ್ತು.
ಈ ಮೂಲಕ ಧಾರವಾಡ ಜಿಲ್ಲೆಯಲ್ಲಿ ಕೊರೊನಾದಿಂದ ಬಲಿಯಾದವರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ.