ETV Bharat / state

ಬೆಳಕಿಗೆ ಬಂತು ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯ ಮತ್ತೊಂದು ಎಡವಟ್ಟು...! - Kim's Hospital

ಕಿಮ್ಸ್ ಆಡಳಿತ ಮಂಡಳಿ ಭದ್ರತಾ ಸಿಬ್ಬಂದಿಯ ಆರೋಗ್ಯ, ಸೌಲಭ್ಯಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಆಸ್ಪತ್ರೆಯಲ್ಲಿ ಕೆಲಸ ಮಾಡುವ ಭದ್ರತಾ ಸಿಬ್ಬಂದಿಗೆ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂಬ ವಿಚಾರ ಬಯಲಾಗಿದೆ.

Another mistake by prestigious KIMS hospital.. !!
ಬೆಳಕಿಗೆ ಬಂತು ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯ ಮತ್ತೊಂದು ಯಡವಟ್ಟು...!!
author img

By

Published : May 31, 2020, 1:46 PM IST

ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು ಬೆಳಕಿಗೆ ಬಂದಿದೆ. ಆಸ್ಪತ್ರೆಯಲ್ಲಿ ಕೆಲಸ ಮಾಡುವ ಭದ್ರತಾ ಸಿಬ್ಬಂದಿಗೆ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿಗಿಲ್ಲ ಸುರಕ್ಷತಾ ಕಿಟ್​!

ಸೌಲಭ್ಯಗಳ ಕೊರತೆ ನಡುವೆಯೂ ಕಿಮ್ಸ್ ನ ಭದ್ರತಾ ಸಿಬ್ಬಂದಿ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಆಸ್ಪತ್ರೆಗೆ ಬರುವವರನ್ನು ತಪಾಸಣೆ ಮಾಡುವಾಗ ಬಳಸಬೇಕಾದ ಸಾಮಾನ್ಯ ಕಿಟ್​ಗಳನ್ನೂ ಸಹ ಇಲ್ಲಿ ನೀಡಲಾಗುತ್ತಿಲ್ಲ ಎನ್ನಲಾಗ್ತಿದೆ.

ಥರ್ಮಲ್ ಸ್ಕ್ಯಾನಿಂಗ್ ಮಷಿನ್ ಮಾತ್ರವಲ್ಲದೇ ಸ್ಯಾನಿಟೈಜರ್, ಹ್ಯಾಂಡಗ್ಲೌಸ್​ ಕೂಡ ನೀಡಿಲ್ಲ. ಈ ಹಿನ್ನೆಲೆ ಕೆಲ ಸಿಬ್ಬಂದಿ ಸ್ವಂತ ಹಣಕೊಟ್ಟು ಮಾಸ್ಕ್ ಹಾಕಿಕೊಂಡು ಕರ್ತವ್ಯ ನಿರ್ವಹಿಸಿದ್ರೆ, ಇನ್ನೂ ಕೆಲವರು ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಇನ್ನಾದರೂ ಕಿಮ್ಸ್​ ಆಡಳಿತ ಮಂಡಳಿ ಜನರಿಗಾಗಿ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್​ ಸುರಕ್ಷತೆ ಬಗ್ಗೆ ಗಮನಹರಿಸಬೇಕಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.