ಧಾರವಾಡ: ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದ ಹೊಳೆ ಬದಿ ಇರುವ ಮನೆಗಳ ಸ್ಥಳಾಂತರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಆಯಟ್ಟಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಆಯಟ್ಟಿ ಗ್ರಾಮದಲ್ಲಿನ ಹಲವಾರು ಮನೆಗಳು ಹೊಳೆಯ ಬದಿಯಲ್ಲೇ ಇರುವುದರಿಂದ ಇತ್ತೀಚೆಗೆ ಸುರಿದ ಮಳೆಯ ಅಬ್ಬರಕ್ಕೆ ಕುಸಿದು ಬಿದ್ದಿವೆ. ಹೀಗಾಗಿ ಹೊಳೆಯ ಪಕ್ಕದಲ್ಲಿರುವ ಮನೆಗಳನ್ನು ಸ್ಥಳಾಂತರ ಮಾಡಿ ಆಗುವ ಅನಾಹುತಗಳನ್ನು ತಪ್ಪಿಸಬೇಕು ಎಂದು ಆಗ್ರಹಿಸಿದ ನೂರಾರು ಗ್ರಾಮಸ್ಥರು, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
2009-10ರಲ್ಲಿ ಬಿಎಸ್‌ವೈ ಮುಖ್ಯಮಂತ್ರಿ ಆಗಿದ್ದಾಗಲೂ ನೆರೆ ಪ್ರವಾಹ ಹಿನ್ನಲೆ ಕೆಲವು ಮನೆಗಳನ್ನು ಸ್ಥಳಾಂತರ ಮಾಡುವಂತೆ ಸೂಚನೆ ನೀಡಲಾಗಿತ್ತು. ಆದೇ ರೀತಿ ಈ ಬಾರಿಯೂ ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಆಯಟ್ಟಿ ಗ್ರಾಮಸ್ಥರು ಒತ್ತಾಯಿಸಿದರು.