ETV Bharat / state

ಹು-ಧಾ ಮಹಾನಗರ ಪಾಲಿಕೆಯ ವಿವಿಧ ಆಸ್ಪತ್ರೆಗಳಿಗೆ ತಾತ್ಕಾಲಿಕ ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಅರ್ಜಿ ಆಹ್ವಾನ - ಸ್ತ್ರೀರೋಗ ತಜ್ಞ ವೈದ್ಯರು

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿವಿಧ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ನ.22 ಮತ್ತು 23 ರಂದು ನೇರ ಸಂದರ್ಶನ ಇರಲಿದೆ .

Metropolitan Corporation Commissioner Dr. Iswara Ullagaddi
ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ
author img

By ETV Bharat Karnataka Team

Published : Nov 9, 2023, 10:52 PM IST

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿವಿಧ ಆಸ್ಪತ್ರೆಗಳಲ್ಲಿ ಅವಶ್ಯಕತೆಗನುಗುಣವಾಗಿ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞ ವೈದ್ಯರು, ಎ.ಮ್.ಬಿ.ಬಿ.ಎಸ್. ವೈದ್ಯರು ಹಾಗೂ ಸಾಮಾನ್ಯ ವೈದ್ಯರು, ಅರವಳಿಕೆ ತಜ್ಞರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳು, ಎಲ್.ಡಿ.ಸಿ., ಡೇಸ್ಟರ್, ವಾರ್ಡಬಾಯ್, ಆಯಾ ಮತ್ತು ಆಂಬ್ಯೂಲೆನ್ಸ್ ವಾಹನ ಚಾಲಕರುಗಳ ಹುದ್ದೆಗೆ ಮಾಸಿಕ ಗೌರವಧನ ಆಧಾರದ ಮೇಲೆ ಹನ್ನೊಂದು ತಿಂಗಳ ಅವಧಿಗೆ ಸೇವೆಯನ್ನು ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿವಿಧ ಆಸ್ಪತ್ರೆಗಳಲ್ಲಿ ಅವಶ್ಯಕತೆಗನುಗುಣವಾಗಿ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರು ಎಮ್.ಬಿ.ಬಿ.ಎಸ್. ಸಾಮಾನ್ಯ ವೈದ್ಯರು, ಹಾಗೂ ಅರೇ ವೈದ್ಯಕೀಯ ಸಿಬ್ಬಂದಿಗಳನ್ನು ಹನ್ನೊಂದು ತಿಂಗಳ ಅವಧಿಗೆ ಮಾಸಿಕ ಗೌರವಧನ ಆಧಾರದ ಮೇಲೆ ಸೇವೆ ಪಡೆದುಕೊಳ್ಳಲು ಉದ್ದೇಶಿಸಲಾಗಿದೆ.

ಈ ಹುದ್ದೆಗಳಿಗೆ ಸಂಬಂಧಪಟ್ಟ ವಿದ್ಯಾರ್ಹತೆ ಹೊಂದಿದ ಆಸಕ್ತಿವುಳ್ಳ ಅಭ್ಯರ್ಥಿಗಳು ತಮ್ಮ ಮೂಲ ಹಾಗೂ ಧೃಡೀಕೃತ ಸರ್ಟಿಫಿಕೇಟ್​ಗಳೊಂದಿಗೆ ನವೆಂಬರ್ 7 ರಿಂದ ನವೆಂಬರ್​ 18, 2023 ರವರೆಗೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹು.ಧಾ.ಮ.ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆ ಆಡಳಿತ ಕಚೇರಿ ನಂ.14ರಲ್ಲಿ ದ್ವಿತೀಯ ದರ್ಜೆ ಸಹಾಯಕರ ಹತ್ತಿರ ಹೆಸರು ನೊಂದಾಯಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ನವೆಂಬರ್ 22, 2023 ರಂದು ವೈದ್ಯರು ಮತ್ತು ಅರೇ ವೈದ್ಯಕೀಯ ಸಿಬ್ಬಂದಿಗಳಿಗೆ ಮತ್ತು ನವೆಂಬರ್ 23, 2023 ರಂದು ಎಲ್.ಡಿ.ಸಿ., ಡೇಸ್ಸರ್, ವಾರ್ಡಬಾಯ್, ಆಯಾ ಮತ್ತು ಆಂಬ್ಯುಲೆನ್ಸ್ ವಾಹನ ಚಾಲಕರಿಗೆ ನೇರ ಸಂದರ್ಶನವನ್ನು ನಡೆಸಲಾಗುತ್ತಿದೆ.

ಹೆಚ್ಚಿನ ವಿವರಗಳನ್ನು www.hdmc.mrc.gov.in ವೆಬ್‍ಸೈಟನಲ್ಲಿ ಪಡೆದುಕೊಳ್ಳಬಹುದು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ನಿಮ್ಹಾನ್ಸ್​​ನಲ್ಲಿದೆ 32 ಜಿಲ್ಲಾ ಕೋ ಆರ್ಡಿನೇಟರ್​ ಹುದ್ದೆ: ಪದವಿ ಆಗಿದ್ರೆ ಸಾಕು

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ- ನಿಮ್ಹಾನ್ಸ್​ (NIMHANS)ನಲ್ಲಿ ಜಿಲ್ಲಾ ಕೋ ಆರ್ಡಿನೇಟರ್​ನಲ್ಲಿ 32 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ಕೂಡ ತಾತ್ಕಾಲಿಕವಾಗಿ 1 ವರ್ಷಕ್ಕೆ ಮಾತ್ರ ನೇಮಕ ಮಾಡಲಾಗುವುದು. ನಿಮ್ಹಾನ್ಸ್​ನಲ್ಲಿ ಕರ್ನಾಟಕ ಸರ್ಕಾರ ಅನುದಾನಿತ ಯೋಜನೆ ಕರ್ನಾಟಕ ಬ್ರೈನ್​ ಹೆಲ್ತ್​​ ಇನ್ಷಿಯೆಟಿವ್​ ಯೋಜನೆಗೆ 32 ಜಿಲ್ಲಾ ಕೋ ಆರ್ಡಿನೇಟರ್ ಬೇಕಾಗಿದ್ದು, ಜೀವ ವಿಜ್ಞಾನ, ಸಾರ್ವಜನಿಕ ಆರೋಗ್ಯ, ಸಮಾಜಶಾಸ್ತ್ರ, ಗ್ರಾಮೀಣಾಭಿವೃದ್ದಿ, ಅರ್ಥಶಾಸ್ತ್ರ, ಮಾನವ ಸಂಪನ್ಮೂಲ, ಸೋಶಿಯಲ್​ ವರ್ಕ್​, ಸೈಕಾಲಜಿಲ್ಲಿ ಮೊದಲ ದರ್ಜೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣ ಮಾಡಿರಬೇಕು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.