ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮವೊಂದಕ್ಕೆ ಪಂಜಾಬ್ಗೆ ತೆರಳಿದ್ದ ಸಂದರ್ಭದಲ್ಲಿ ಅವರಿಗೆ ಅಪಮಾನ ಮಾಡುವ ಮೂಲಕ ಕಾಂಗ್ರೆಸ್ ಕೀಳು ಮಟ್ಟದ ರಾಜಕೀಯ ಮಾಡಿದೆ ಎಂದು ಶಾಸಕ ಅರವಿಂದ ಬೆಲ್ಲದ ಆಕ್ರೋಶ ವ್ಯಕ್ತಪಡಿಸಿದರು.
'ಪ್ರಜಾಪ್ರಭುತ್ವಕ್ಕೆ ಧಕ್ಕೆತರುವ ಕೆಲಸ ಇಂದು ಪಂಜಾಬ್ನಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದೆ. ಇದೇ ಪಕ್ಷ ನಮ್ಮ ದೇಶಕ್ಕೆ ತುರ್ತು ಪರಿಸ್ಥಿತಿಯ ಬಳುವಳಿ ನೀಡಿದೆ. ಅಂತಹ ಕಾಂಗ್ರೆಸ್ ಸರ್ಕಾರದಿಂದ ಬೇರೇನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಆದರೆ, ಪ್ರಧಾನಿಗೆ ರಸ್ತೆ ಮೇಲೆ ನಿಲ್ಲುವಂತೆ ಮಾಡಿದ್ದು ಘನಘೋರ ಅಪರಾಧ' ಎಂದು ಹರಿಹಾಯ್ದರು.
'ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇಂಥ ಕೆಟ್ಟ ಕೆಲಸ ಮಾಡುತ್ತಾರೆಂದು ಅಂದುಕೊಂಡಿರಲಿಲ್ಲ. ರಾಜಕೀಯ ಮಾಡಬೇಕು, ಆದರೆ ಇಂತಹ ಕೆಳಮಟ್ಟದ ರಾಜಕಾರಣ ಮಾಡಬಾರದು. ಇದನ್ನು ಪ್ರತಿಯೊಬ್ಬ ನಾಗರಿಕ ಕೂಡಾ ಖಂಡಿಸುತ್ತಾನೆ' ಎಂದು ಹೇಳಿದರು.
ಇದನ್ನೂ ಓದಿ: ನೂತನ ಎಂಎಲ್ಸಿಗಳ ಪ್ರಮಾಣವಚನ.. ಸಮಾರಂಭದಲ್ಲಿ ಕೋವಿಡ್ ನಿಯಮವೇ ಮಾಯ!