ಹುಬ್ಬಳ್ಳಿ : ಮಹಾನಗರ ಪಾಲಿಕೆಯು 2021–22ನೇ ಸಾಲಿನಲ್ಲಿ ಅವಳಿ ನಗರಗಳ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಕಲ್ಪಿಸಲು ರೂಪಿಸಿದ್ದ 711 ಕೋಟಿ ರೂಪಾಯಿ ಮೊತ್ತದ ಬಜೆಟ್‌ಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಹು-ಧಾ ಮಹಾನಗರ ಪಾಲಿಕೆ ಚುನಾವಣೆ ನಡೆಯದ ಹಿನ್ನೆಲೆ ಪಾಲಿಕೆ ಸದಸ್ಯರು ಇಲ್ಲದೆ, ಈ ಬಾರಿ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಸಿದೆ. ಹಳೇ ಬಡಾವಣೆಗಳ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲು ಪಾಲಿಕೆ ಮೂಲಸೌಕರ್ಯ ಕಲ್ಪಿಸಲು ಹೆಚ್ಚಿನ ಒತ್ತು ನೀಡಿದ್ದು, ರಸ್ತೆ ನಿರ್ಮಾಣ, ಅಭಿವೃದ್ಧಿ ಮತ್ತು ಚರಂಡಿ ನಿರ್ಮಾಣಕ್ಕೆ ಸುಮಾರು 128 ಕೋಟಿ ರೂಪಾಯಿ ಮೀಸಲಿಟ್ಟಿದೆ.
ರಸ್ತೆಗಳ ವಿಸ್ತರಣೆ ಹಾಗೂ ಭೂ ಸ್ವಾಧೀನದ ಪರಿಹಾರಕ್ಕೆ ಪ್ರತ್ಯೇಕ 30 ಕೋಟಿ ರೂಪಾಯಿ ನಿಗದಿ ಮಾಡಿದೆ. ಪಾಲಿಕೆ ಸದಸ್ಯರು ಇಲ್ಲದಿರುವುದರಿಂದ ಪಾಲಿಕೆ ಅಧಿಕಾರಿಗಳೇ ಬಜೆಟ್ ಸಿದ್ಧಪಡಿಸಿದ್ದಾರೆ.
ನಗರೋತ್ಥಾನ ಯೋಜನೆಯಡಿ 126 ಕೋಟಿ ರೂಪಾಯಿ, 15ನೇ ಹಣಕಾಸು ಯೋಜನೆ ಹಾಗೂ ಇನ್ನಿತರ ವಿಶೇಷ ಅನುದಾನ ಸೇರಿ ವಿವಿಧ ಯೋಜನೆಗಳ ಮೂಲಕ ರಾಜ್ಯ ಸರ್ಕಾರದಿಂದ 415 ಕೋಟಿ ರೂಪಾಯಿ ಲಭಿಸಲಿದೆ. 218 ಕೋಟಿಯನ್ನು ತೆರಿಗೆ ಸಂಗ್ರಹ ಸೇರಿದಂತೆ ಸ್ಥಳೀಯ ಸಂಪನ್ಮೂಲಗಳಿಂದ ಸಂಗ್ರಹಿಸಿ ಖರ್ಚು ಮಾಡಲು ಪಾಲಿಕೆ ನಿರ್ಧರಿಸಿದೆ.
ಓದಿ: ಅಗತ್ಯಬಿದ್ದರೆ ಮೈಸೂರಲ್ಲಿ ಮಿನಿ ಲಾಕ್‌ಡೌನ್: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಚುನಾಯಿತ ಜನಪ್ರತಿನಿಧಿಗಳು ಹೆಚ್ಚುವರಿ 42 ಕೋಟಿ ರೂಪಾಯಿ ಅನುದಾನ ತರುವ ನಿರೀಕ್ಷೆಯಿದೆ. ಆದ್ದರಿಂದ ಬೆಂಗಳೂರಿನ ಚರ್ಚ್‌ಸ್ಟ್ರೀಟ್ ಮಾದರಿ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ತಲಾ ಒಂದು ರಸ್ತೆ ಅಭಿವೃದ್ಧಿಗೆ ಪಾಲಿಕೆ ಲೆಕ್ಕ ಹಾಕಿದೆ.