ಹುಬ್ಬಳ್ಳಿ: ಬೀಗ ಹಾಕಿದ ಮನೆಗಳನ್ನು ಟಾರ್ಗೆಟ್ ಮಾಡಿ ಮನೆಗಳಿಗೆ ಕನ್ನ ಹಾಕುತ್ತಿದ್ದ ಕುಖ್ಯಾತ ಕಳ್ಳನನ್ನು ಬಂಧಿಸುವಲ್ಲಿ ಶಹರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹತ್ತಿಮತ್ತೂರ ತಾಂಡಾದ ಗಣೇಶ ಶಂಕರ ಲಮಾಣಿ ಎಂದು ಗುರುತಿಸಲಾಗಿದೆ. ಬಂಧಿತನಿಂದ 7,41,000 ಚಿನ್ಮಾಭರಣ, ನಗದು ವಶಪಡಿಸಿಕೊಳ್ಳಲಾಗಿದೆ.
ಹುಬ್ಬಳ್ಳಿ ರೇಲ್ವೆ ನಿಲ್ದಾಣದ ಬಳಿಯಿರುವ ಮೆಡಿಕಲ್ ಶಾಪ್ ಮಾಲೀಕ ದಿನೇಶ ಜೈನ್ ಮನೆಯಲ್ಲಿ ಮೇ 6ರ ರಾತ್ರಿ ಕಳ್ಳತನ ಮಾಡಿ ಪರಾರಿಯಾಗಿದ್ದ. ತಕ್ಷಣ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.