ಧಾರವಾಡ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದವರನ್ನ ಬಂಧಿಸುವಲ್ಲಿ ಉಪನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಕಮಲಾಪುರದಲ್ಲಿ ಬೆಟ್ಟಿಂಗ್ ದಂಧೆ ನಡೆದಿತ್ತು. ಈ ವೇಳೆ ಉಪನಗರ ಠಾಣೆ ಪೊಲೀಸರು ದಾಳಿ ನಡೆಸಿ ಬೆಟ್ಟಿಂಗ್‌ನಲ್ಲಿ ತೊಡಗಿದ್ದವರನ್ನ ಬಂಧಿಸಿದ್ದಾರೆ.
ಚೀನಿ ಬಸ್ಸು ಅಲಿಯಾಸ್ ಬಸವರಾಜ ಹೆಬ್ಬಳ್ಳಿ, ಕಿರಣ ಕಟ್ಟೇಕಾರ ಎಂಬುವರು ಬಂಧಿತ ಆರೋಪಿಗಳು. ಬಂಧಿತರಿಂದ 2.15 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿ ಚೀನಿ ಬಸ್ಸು ಎಂಬಾತ ಮಾಜಿ ಸಚಿವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ.