ETV Bharat / state

ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಹೆಸರು ಡಿಲೀಟ್ ಆಗಿದ್ದು ನಿಜ: ಅರವಿಂದ ಬೆಲ್ಲದ - mla arvind bellad

ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಮತದಾರರ ಹೆಸರು ಡಿಲೀಟ್ ಆಗಿದ್ದು ನಿಜ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

arvind bellad
ಅರವಿಂದ ಬೆಲ್ಲದ
author img

By

Published : Dec 2, 2022, 1:45 PM IST

ಹುಬ್ಬಳ್ಳಿ: ಹುಬ್ಬಳ್ಳಿ - ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಮತದಾರರ ಹೆಸರು ಡಿಲೀಟ್ ಆಗಿದ್ದು ನಿಜ. ಮತದಾರರ ಪಟ್ಟಿ ಪರಿಶೀಲಿಸಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಖಾಸಗಿ ಏಜೆನ್ಸಿಗಳು ಎಲ್ಲೆಡೆ ಸರ್ವೇ ಮಾಡುತ್ತಿವೆ. ನಮ್ಮ ಪಕ್ಷದಿಂದಲೂ ಸರ್ವೇ ಮಾಡಿ, ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅರವಿಂದ ಬೆಲ್ಲದ

ನಗರದ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಆ್ಯಪ್ ಮೂಲಕ ಸರ್ವೇ ಮಾಡುತ್ತಿದ್ದೇವೆ, ಮಾಹಿತಿಯನ್ನು ಪಾಲಿಕೆಗೆ ಸಲ್ಲಿಸುತ್ತೇವೆ. ಹೊಸ ಓಟರ್‌ಗಳನ್ನು ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗುತ್ತಿದೆ. ಚುನಾವಣಾಧಿಕಾರಿಗಳು ಪರಿಶೀಲಿಸಿ ಸೂಕ್ತ ಹೆಸರುಗಳನ್ನು ಸೇರಿಸುತ್ತಾರೆ. ಸೇರ್ಪಡೆ, ತೆಗೆದುಹಾಕುವುದು ಸಹಜ ಪ್ರಕ್ರಿಯೆ. ಒಮ್ಮೆ ಹೆಸರು ಕೈಬಿಟ್ಟಿದ್ದರೆ ಮರಳಿ ಸೇರಿಸಲು ಅವಕಾಶವಿದೆ ಎಂದರು.

ಇದನ್ನೂ ಓದಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023: ಮನೆ ಮನೆ ಸಮೀಕ್ಷೆ....

ETV Bharat Logo

Copyright © 2024 Ushodaya Enterprises Pvt. Ltd., All Rights Reserved.