ಧಾರವಾಡ: ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಮತ್ತು ರಾಜ್ಯದ ಗೌರವಧನ ಸೇರಿಸಿ ಕನಿಷ್ಠ ಮಾಸಿಕ 12,000 ರೂ. ಗೌರವಧನ ನಿಗದಿಗೊಳಿಸಲು ಹಾಗೂ 10 ತಿಂಗಳ ಬಾಕಿ ಪ್ರೋತ್ಸಾಹಧನವನ್ನು ಕೂಡಲೇ ವಿತರಿಸುವಂತೆ ಆಗ್ರಹಿಸಿ ರಾಜ್ಯ ಯೂನಿಯನ್ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಧಾರವಾಡದ ಕಲಾಭವನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ಕೋರ್ಟ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿತು. ನಂತರ ಜಿಲ್ಲಾಧಿಕಾರಿ ದೀಪಾ ಚೋಳನ್ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.
ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುವ ಪ್ರೋತ್ಸಾಹಧನವನ್ನು ಒಟ್ಟಿಗೆ ಸೇರಿಸಿ ಕನಿಷ್ಠ ಮಾಸಿಕ ಗೌರವಧನ 12 ಸಾವಿರ ನೀಡಬೇಕು. ಆಶಾ ಸಾಪ್ಟ್ ಅಥವಾ ಆರ್.ಸಿ.ಎಚ್. ಪೋರ್ಟಲ್ಗೆ ಆಶಾ ಪ್ರೋತ್ಸಾಹಧನ ಜೋಡಣೆ ರದ್ದುಪಡಿಸಬೇಕು. ನಿವೃತ್ತಿ ಹೊಂದುವ ಆಶಾಗಳಿಗೆ ಪಿಂಚಣಿ ನೀಡಬೇಕು. ಹೆರಿಗೆ ರಜೆ ನೀಡಬೇಕು ಎಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು.