ಹುಬ್ಬಳ್ಳಿ : ವಾಣಿಜ್ಯ ನಗರಿಯಲ್ಲಿ ಪುಂಡ ಪೋಕರಿಗಳ ಹಾವಳಿ ಹೆಚ್ಚಿದೆ. ಮಹಿಳೆಯರು ಒಬ್ಬಂಟಿಯಾಗಿ ಓಡಾಡಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.
ನಗರದ ಹೆಗ್ಗೇರಿ ಮಾರುತಿ ಕಾಲೋನಿಯಲ್ಲಿ ತಡರಾತ್ರಿ ಮಹಿಳೆಯರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಮದ್ಯ ಸೇವನೆ ಮಾಡಿ ಮಾರಕಾಸ್ತ್ರಗಳಿಂದ ಹೊಡೆದು ಪರಾರಿಯಾಗಿದ್ದಾರೆ. ರಾಕೇಶ್, ಸಚಿನ್ ಹೆಬ್ಬಳ್ಳಿ ಎಂಬುವರೇ ಮಹಿಳೆಯರ ಜೊತೆಗೆ ಅನುಚಿತ ವರ್ತನೆ ನಂತರ ಪುಂಡಾಟ ನಡೆಸಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.
ಪೊಲೀಸರಿಗೆ ದೂರು ನೀಡಿದ್ರೂ ಯಾವುದೇ ಪ್ರಯೋಜನವಿಲ್ಲ : ತಲೆ, ಭುಜಕ್ಕೆ ಹೊಡೆದಿದ್ದಾರೆ. ಇದರಿಂದ ಮಹಿಳೆಯರು ರಕ್ತಸ್ರಾವದಿಂದ ಬೀದಿಯಲ್ಲಿಯೇ ಬಿದ್ದರು. ಸ್ಥಳೀಯರು ರಕ್ಷಣೆಗೆ ಬಂದಿಲ್ಲ. ಮೇಲಿಂದ ಮೇಲೆ ಮಹಿಳೆಯರ ಮೇಲೆ ಹಲ್ಲೆ ನಡೆಯುತ್ತಿವೆ. ಈ ಬಗ್ಗೆ ಮಹಿಳೆಯರು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಹಿಳೆಯರು ಆರೋಪಿಸಿದ್ದಾರೆ.
ಓದಿ:ದೆಹಲಿಯಲ್ಲಿ ಕಾಮುಕರ ಅಟ್ಟಹಾಸ: ರೈಲ್ವೆ ಪ್ಲಾಟ್‌ಫಾರ್ಮ್ ಬಳಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ!