ಹುಬ್ಬಳ್ಳಿ: ನಗರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಸಿಬ್ಬಂದಿ ಇಲ್ಲದೆ ಬಿಕೋ ಎನ್ನುತ್ತಿದೆ.
ಕಚೇರಿಯಲ್ಲಿ ಸರ್ವರ್ ಸಮಸ್ಯೆ ಒಂದೆಡೆಯಾದರೆ, ಮತ್ತೊಂದೆಡೆ ಪಡಿತರ ಚೀಟಿ ವಿತರಣೆ ಮಾಡಬೇಕಾದ ಸಿಬ್ಬಂದಿ ಕಚೇರಿಗೆ ಆಗಮಿಸುತ್ತಿಲ್ಲ. ಈ ಬಗ್ಗೆ ಕೇಳಿದ್ರೆ ಸರ್ವರ್ ಸಮಸ್ಯೆಯ ನೆಪ ಹೇಳುತ್ತಿದ್ದಾರೆ.
ಹೀಗಾಗಿ ದೂರದೂರುಗಳಿಂದ ಪಡಿತರ ಚೀಟಿಯ ಕೆಲಸಗಳಿಗಾಗಿ ಕಚೇರಿಗೆ ಆಗಮಿಸುವ ಸಾರ್ವಜನಿಕರು ಪರದಾಡುವಂತಾಗಿದೆ.