ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ ಪ್ರಕರಣದ ಆರೋಪಿ ಮಾಜಿ ಸೈನಿಕನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಭಾನುವಾರ ಸಂಜೆ ಜಿಲ್ಲೆಯ ಕಲಘಟಗಿ ತಾಲೂಕಿನ ಕಲಗುಂಡಿ ಗ್ರಾಮದಲ್ಲಿ ಗಂಗಾಧರ ನಿಂಗಪ್ಪ ನೂಲ್ವಿ ಎಂಬ ಮಾಜಿ ಸೈನಿಕ ತಿಪ್ಪೆಗೆ ಕಸ ಹಾಕುವ ವಿಷಯಕ್ಕೆ ಜಗದೀಶ ತಾಂಬೆ ಎಂಬ ಯುವಕನಿಗೆ ಚಾಕುವಿನಿಂದ ಇರಿದಿದ್ದ. ತೀವ್ರ ರಕ್ತಸ್ರಾವದಿಂದ ಯುವಕ ಮೃತಪಟ್ಟಿದ್ದ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಕೊಲೆ ಆರೋಪಿ ಮಾಜಿ ಸೈನಿಕನ ಕೈ, ಕಾಲು ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಇದನ್ನೂ ಓದಿ: ಕಲಘಟಗಿ: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನ ಕೊಲೆ
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೆ ಪ್ರಚೋದನೆ ನೀಡಿದ ಶಾರದ ಪಾಟೀಲ್ ಎಂಬ ಮಹಿಳೆ ಹಾಗೂ ಕೊಲೆ ಮಾಡಿದ ಆರೋಪಿ ಗಂಗಾಧರ ನೂಲ್ವಿಯನ್ನು ಕಲಘಟಗಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.