ಧಾರವಾಡ: ಮೂವರು ಯುವಕರು ಸೇರಿಕೊಂಡು ಮತ್ತೊಬ್ಬ ಯುವಕನ ಮೇಲೆ ಹಾಡಹಗಲೇ ಹಿಗ್ಗಾಮುಗ್ಗಾ ಥಳಿಸಿ ಹಲ್ಲೆ ನಡೆಸಿರುವ ಘಟನೆ ಬಾಸೆಲ್ ಮಿಶನ್ ಹೆಬ್ರಿಕ್ ಮೆಮೋರಿಯಲ್ ಚರ್ಚ್ ಬಳಿ ಇಂದು ನಡೆದಿದೆ.
ಈ ಹಲ್ಲೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಆದರೆ, ಮೂವರು ಯುವಕರು ಸೇರಿಕೊಂಡು ಒಬ್ಬ ಯುವಕನನ್ನು ಮನಬಂದಂತೆ ಥಳಿಸಿದ್ದಾರೆ. ಆತ ಕೆಳಗಡೆ ಬಿದ್ದರೂ ಬಿಡದ ಆ ಮೂರೂ ಜನ ಯುವಕರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.
ಹಲ್ಲೆ ಮಾಡುತ್ತಿದ್ದ ದೃಶ್ಯವನ್ನು ನೋಡುತ್ತ ನಿಂತಿದ್ದವರನ್ನು ಬೆದರಿಸಿದ ಆ ಮೂರು ಜನ ನಂತರ ಅಲ್ಲಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ವಿದ್ಯಾಗಿರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಹಲ್ಲೆ ಮಾಡಿದವರ ಪತ್ತೆಗೆ ಜಾಲ ಬೀಸಿದ್ದಾರೆ.
ಇದನ್ನೂ ಓದಿ: ಬಸ್ ಸೌಕರ್ಯ ಕಲ್ಪಿಸಿಕೊಡುವಂತೆ ಮಾಜಿ ಮುಖ್ಯಮಂತ್ರಿಗೆ ಮಕ್ಕಳ ಮನವಿ